Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನೀಟ್ ಪ್ರಶ್ನೆಪತ್ರಿಕೆ...

Raichur | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 5:03 PM IST
share
Raichur | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಎಸ್‌ಎಫ್‌ಐ-ಡಿವೈಎಫ್ ನೇತೃತ್ವದಲ್ಲಿ ತರಗತಿ ಬಹಿಷ್ಕಾರ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ರಾಯಚೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಎಸ್‌ಎಫ್‌ಐ ಹಾಗೂ ಡಿವೈಎಫ್ ಸಂಘಟನೆಗಳ ನೇತೃತ್ವದಲ್ಲಿ ನಗರದ ವಿವಿಧ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ದೇಶದ ವಿದ್ಯಾರ್ಥಿ-ಯುವಜನರ ಕ್ಷಮೆಯನ್ನು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕೇಳಬೇಕು ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಘಟನೆಗಳಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಗೊಳಿಸಬೇಕು, ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಿ, ಶಿಕ್ಷೆಯ ಪ್ರಮಾಣವನ್ನು ಜೀವಾವಧಿ ಶಿಕ್ಷೆಯವರೆಗೆ ಹೆಚ್ಚಿಸುವಂತೆ ಕಾನೂನು ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳ ಮುಖಂಡರಾದ ರಮೇಶ್ ಯಾಪಲದಿನ್ನಿ, ವೀರೇಶ್ ಯಾಪಲದಿನ್ನಿ, ರಫಿ, ವಿದ್ಯಾರ್ಥಿ ಪಾಲಕರಾದ ಡಿ.ಎಸ್. ಶರಣಬಸವ, ಕೆ.ಜಿ. ವಿರೇಶ್, ಕರಿಯಪ್ಪ ಅಚ್ಚೋಳಿ ಹಾಗೂ ವಿದ್ಯಾರ್ಥಿಗಳಾದ ರಾಘವೇಂದ್ರ, ರಾಜು, ಮೇಶಕ್ ಗುರುರಾಜ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

NEETproteststudentsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X