Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಗ್ರಾಪಂಗಳಿಗೆ ದಿಢೀರ್ ಭೇಟಿ:...

Raichur | ಗ್ರಾಪಂಗಳಿಗೆ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿ, ವಿವಿಧ ಚಟುವಟಿಕೆ ಪರಿಶೀಲಿಸಿದ ಸಿಇಒ ಈಶ್ವರ್ ಕಾಂದೂ

ವಾರ್ತಾಭಾರತಿವಾರ್ತಾಭಾರತಿ30 Sept 2026 7:56 PM IST
share
Raichur | ಗ್ರಾಪಂಗಳಿಗೆ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿ, ವಿವಿಧ ಚಟುವಟಿಕೆ ಪರಿಶೀಲಿಸಿದ ಸಿಇಒ ಈಶ್ವರ್ ಕಾಂದೂ

ರಾಯಚೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.

ಮೊದಲು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಡಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಿಬಿ–ಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಎನ್‌ಎಂಆರ್ ಮೂಲಕ ಕೂಲಿ ಕಾರ್ಮಿಕರ ಹಾಜರಾತಿ ಹಾಗೂ ಕೆಲಸದ ಮಾಹಿತಿಯನ್ನು ಪಡೆದು, ಎನ್‌ಎಂಎಂಎಸ್ ಆನ್‌ಲೈನ್ ಹಾಜರಾತಿಯನ್ನೂ ಪರಿಶೀಲಿಸಿದರು. ಈ ವೇಳೆ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಉದ್ಯೋಗ ಒದಗಿಸುವಂತೆ ಕಾರ್ಮಿಕರು ಮನವಿ ಮಾಡಿದರು. ಅಲ್ಲದೆ, 125 ದಿನಗಳಿಗಿಂತ ಹೆಚ್ಚುವರಿಯಾಗಿ ಇನ್ನೂ 50 ದಿನಗಳ ಕೂಲಿ ಕೆಲಸ ಒದಗಿಸುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಅವರು, ಕಾರ್ಮಿಕರ ಮನವಿಯಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ನಂತರ ಆರೋಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಾಜರಾತಿಯನ್ನು ಪರಿಶೀಲಿಸಿದರು. ನಿರಂತರ ಶಿಕ್ಷಣದ ಹಾಜರಾತಿ ಕುರಿತು ಮಾಹಿತಿ ಪಡೆದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕ ಸೇರಿದಂತೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಸಮರ್ಪಕವಾಗಿ ವಿತರಿಸಲಾಗುತ್ತಿವೆಯೇ ಎಂಬುದನ್ನು ವಿಚಾರಿಸಿದರು.

ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ದಾಸ್ತಾನು, ಮಕ್ಕಳಿಗೆ ಒದಗಿಸಲಾಗುತ್ತಿರುವ ಆಹಾರ ಹಾಗೂ ಇತರ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

ನಂತರ ಮಾನ್ವಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ವಹಿಸಲಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದರು. ಮೆನು ಚಾರ್ಟ್ ಪ್ರಕಾರ ವಿದ್ಯಾರ್ಥಿನಿಯರಿಗೆ ಊಟ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ ಹಾಗೂ ವಸತಿ ನಿಲಯದಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ದಾಸ್ತಾನು ಕೊಠಡಿಯನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದ್ದ ಊಟವನ್ನು ಸ್ವತಃ ಸವಿದು ಗುಣಮಟ್ಟ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾನ್ವಿ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್, ಸಹಾಯಕ ನಿರ್ದೇಶಕಿ ದೀಪಾ ಅರಳಿಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡಮನಿ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸತೀಶ್, ಅಂಗನವಾಡಿ ಮೇಲ್ವಿಚಾರಕಿ ಮಲ್ಲಮ್ಮ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಕುರ್ಡಿ ಹಾಗೂ ಆರೋಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿಬಿ–ಜಿ ರಾಮ್‌ಜಿ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.

Tags

Gram PanchayatsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X