ರಾಯಚೂರು ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ 6 ನೇ ರಾಯಚೂರು ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬೀನ್ ಮೋಹಾಪಾತ್ರ ಅವರು ಕಾರ್ಯಕ್ರಮ ಆಯೋಜಿಸಿದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಬಳಿಕ ಮೋಹಪಾತ್ರ ಮಾತನಾಡಿ, ಕನ್ನಡ ನಾಡು ನುಡಿಗೆ ಅನೇಕರು ಶ್ರಮಿಸಿದ್ದಾರೆ. ಕನ್ನಡ ಭಾಷೆಯ, ನಾಡು ನುಡಿಯ ಬಗ್ಗೆ ಎಲ್ಲರೂ ಅಭಿಮಾನ ಹೊಂದಬೇಕು, ಕನ್ನಡವನ್ನು ಬಳಸಿ, ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ರಂಗಣ್ಣಪಾಟೀಲ‌್ ಅಳ್ಳುಂಡಿ, ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಕಸಾಪ ಪದಾಧಿಕಾರಿಗಳಾದ ಪಂಪಯ್ಯ ಸಾಲಿಮಠ, ರಾವುತರಾವ್ ಬರೂರು, ರೇಖಾ ಬಡಿಗೇರ್, ವಿಜಯರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.
Next Story







