Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನಗರದ ಅಭಿವೃದ್ಧಿಗೆ ವಿವಿಧ...

ರಾಯಚೂರು | ನಗರದ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯ; ಆಯುಕ್ತ ಜುಬಿನ್

ವಾರ್ತಾಭಾರತಿವಾರ್ತಾಭಾರತಿ27 Feb 2025 6:17 PM IST
share
Photo of Metting

ರಾಯಚೂರು : ರಾಷ್ಟ್ರೀಯ ಜೀವನೋಪಾಯ ಅಭಿಯಾನದ ದೀನದಯಾಳ್ ಜನ ಆಜೀವಿಕ ಯೋಜನೆಯಡಿ ರಾಯಚೂರು ನಗರದಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ನೂತನ ವಿಚಾರಗಳ ಮಾಹಿತಿಯನ್ನು ಒದಗಿಸಬೇಕು. ಅಲ್ಲದೆ ನಗರದ ಅಭಿವೃದ್ಧಿಗೆ ವಿವಿಧ ಇಲಾಖೆಗಳು ಒಗ್ಗಟಿನಿಂದ ಕೆಲಸ ಮಾಡುವ ಮೂಲಕ ಸಹಕಾರ ನೀಡಬೇಕೆಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೂಹಪಾತ್ರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫೆ.27ರ ಗುರುವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅವರ ಹೊಸ ಯೋಜನೆಯಾದ ದೀನ್ದಯಾಳ್ ಜನ ಅಜೀವಿಕ ಯೋಜನೆಗೆ ಪ್ರಾಯೋಗಿಕವಾಗಿ ರಾಯಚೂರು ಮಹಾನಗರ ಪಾಲಿಕೆ ಆಯ್ಕೆಯಾಗಿದ್ದು, ಕ್ರಿಯಾ ಯೋಜನೆಯನ್ನು ತಯಾರಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮುಂದಿನ ಐದು ವರ್ಷಗಳಲ್ಲಿ ನಗರದ ಎಲ್ಲಾ ನಿರುದ್ಯೋಗಿ ಯುವಕರಿಗೆ ಹಾಗೂ ಉದ್ಯೋಗ ರಹಿತರಿಗೆ ಸ್ವಯಂ ಉದ್ಯೋಗವನ್ನು ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಕಟ್ಟಡ ಕಾರ್ಮಿಕರು, ಸಾಗಾಣಿಕೆ ಕಾರ್ಮಿಕರು, ಗಿಗ್ ಕಾರ್ಮಿಕರು, ಆರೈಕೆ ಕಾರ್ಯಕರ್ತರು, ತ್ಯಾಜ್ಯ ಕೆಲಸಗಾರರು ಹಾಗೂ ಮನೆಗೆಲಸ ಎಂಬ ಆರು ದುರ್ಬಲ ವಲಯಗಳಲ್ಲಿ ಉದ್ಯೋಗ ಸೃಷ್ಟಿಸಲು ಎಲ್ಲಾ ಅಧಿಕಾರಿಗಳು ಕ್ರಮ ವಹಿಸಬೇಕು. ಜೊತೆಗೆ ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಆದಾಯವನ್ನು ಹೇಗೆ ಹೆಚ್ಚಳ ಮಾಡಬೇಕೆಂಬ ವಿಚಾರದ ಬಗ್ಗೆ ಅಧಿಕಾರಿಗಳು ತಮ್ಮ ವಿಚಾರಗಳನ್ನು ತಿಳಿಸಬಹುದಾಗಿದೆ ಎಂದರು.

ಮೂರು ದಿನದಲ್ಲಿ ಮಾಹಿತಿ ಸಲ್ಲಿಸಿ :

ತಯಾರಿಕೆ ಮತ್ತು ಸೇವೆಗಳನ್ನು ಒದಗಿಸುವ ಸ್ವಯಂ ಉದ್ಯೋಗ ಸೃಷ್ಟಿಗೂ ಅಧಿಕಾರಿಗಳು ಮುಂದಾಗಬೇಕಿದೆ. ಈ ಎಲ್ಲಾ ಮಾಹಿತಿಗಳನ್ನು ಸರ್ಕಾರಕ್ಕೆ ತಲುಪಿಸಲು 15 ದಿನಗಳ ಕಾಲಾವಕಾಶವಿದ್ದು, ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಯೋಜನೆಗಳ ಮಾಹಿತಿ ಹಾಗೂ ಇತರೆ ಮಾಹಿತಿಗಳನ್ನು ಮೂರು ದಿನದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು.

ಈ ಯೋಜನೆಯಡಿ ಕಾರ್ಯಕ್ರಮಗಳನ್ನು ರಾಯಚೂರು ನಗರದಲ್ಲಿ ಅನುಷ್ಠಾನಗೊಳಿಸಲು ಟಾಸ್ಕ್ ಫೊರ್ಸ್ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಿಂದ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತು ಸಂಪೂರ್ಣ ಕ್ರಿಯಾ ಯೋಜನೆಯನ್ನು ರೂಪಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು. ಟಾಸ್ಕ್ ಫೊರ್ಸ್ ಸಮಿತಿಯಿಂದ ಯೋಜನೆಗೆ ಸಂಬಂದಿಸಿದಂತೆ ಸಮೀಕ್ಷೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕೆಂದು ಸೂಚಿಸಿದರು.

ಪಾಲಿಕೆಯಿಂದಲೇ ನರ್ಸರಿಗಳ ನಿರ್ಮಾಣ :

ನಗರದಲ್ಲಿ ದೂಳಿನ ಸಮಸ್ಯೆ ಹೆಚ್ಚಿದ್ದು, ಪಾಲಿಕೆಯಿಂದಲೇ ನರ್ಸರಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಅಲ್ಲದೆ ಅದೇ ನರ್ಸರಿಯ ಗಿಡಗಳನ್ನು ಉಪಯೋಗಿಸಿಕೊಂಡು ನಗರವನ್ನು ಹಸಿರೀಕರಣ ಮಾಡಿದಾಗ ನಗರ ಶೇ.50ರಷ್ಟು ದೂಳಿನ ಸಮಸ್ಯೆ ಬಗೆಹರಿಯುತ್ತದೆ. ಎಲ್ಲಾ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದಲ್ಲಿ ಮುಂದಿನ ಆರು ತಿಂಗಳಲ್ಲಿ ನಗರದ ಎಲ್ಲರಿಗೂ ಉದ್ಯೋಗ ಸಿಗಲಿವೆ. ನಗರದಲ್ಲಿ 6 ತರಕಾರಿ ಹಾಗೂ ಹಣ್ಣು ಮಾರಾಟ ವಲಯಗಳನ್ನು ಸ್ಥಾಪಿಸಲಾಗುವುದು ಎಂದರು.

13 ರಾಜ್ಯಗಳು, 25 ನಗರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ :

ಯೋಜನೆಯಡಿ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಸ್ತರಿಸಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಈ ಹೊಸ ಯೋಜನೆಯು ಈಗಾಗಲೇ 13 ರಾಜ್ಯಗಳ 25 ನಗರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದ ರಾಯಚೂರು, ಕಲಬುರಗಿ ಹಾಗೂ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಮಾರ್ಗಸೂಚಿಗಳ ಅನುಗುಣವಾಗಿ ಕ್ರಿಯಾ ಯೋಜನೆಯನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಡಾ.ಜಿ.ಯು.ಹುಡೇದ್, ಡಿವೈಎಸ್ಪಿ ಸತ್ಯನಾರಾಯಣ ರಾವ್, ಮಹಾನಗರ ಪಾಲಿಕೆ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ, ಪಾಲಿಕೆ ಅಧಿಕಾರಿ ಸುರೇಶ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಚಿ, ಸಿಪಿಐ ನಾಗರಾಜ ಮೇಕಾ, ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣ ಶಾವಂತಗೇರಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್ ಕುಮಾರ, ಡಿಡಿಪಿಐ ಕೆ.ಡಿ.ಬಡಿಗೇರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಟಿ.ತಿರುಮಲೇಶ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X