Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ತಿಡಿಗೋಳ ದಲಿತರ ಮೇಲಿನ ಹಲ್ಲೆ...

Raichur | ತಿಡಿಗೋಳ ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ‍್ಯಾಲಿ : ಎಸ್.ಮಾರೆಪ್ಪ

ವಾರ್ತಾಭಾರತಿವಾರ್ತಾಭಾರತಿ5 Nov 2026 9:35 PM IST
share
Raichur | ತಿಡಿಗೋಳ ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ‍್ಯಾಲಿ : ಎಸ್.ಮಾರೆಪ್ಪ

ರಾಯಚೂರು: ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಖಂಡಿಸಿ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ ನೈತಿಕ ಬೆಂಬಲ ಸೂಚಿಸುವ ಉದ್ದೇಶದಿಂದ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೈಕ್ ರ‍್ಯಾಲಿ ನಡೆಸಲಾಗುವುದು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಸ್.ಮಾರೆಪ್ಪ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 18ರಂದು ತಿಡಿಗೋಳ ಗ್ರಾಮದಲ್ಲಿ ನಡೆದ ಆಂಜನೇಯ ಸ್ವಾಮಿ ಜಾತ್ರೆಯಲ್ಲಿ ಪರಿಶಿಷ್ಟ ಜಾತಿಯ ಯುವಕರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರ ತಂಡವೊಂದು ಮನಸೋ ಇಚ್ಛೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದೆ ಎಂದು ಆರೋಪಿಸಿದರು. ಘಟನೆ ನಡೆದು ಹಲವು ದಿನಗಳಾದರೂ ಎಲ್ಲ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಗ್ರಾಮದಲ್ಲಿ ಭಯದ ವಾತಾವರಣವಿದ್ದು, ಸಮಾಜದ ಜನರಲ್ಲಿ ನೈತಿಕ ಸ್ಥೈರ್ಯ ತುಂಬಲು ಬೈಕ್ ರ‍್ಯಾಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಿಂಧನೂರು ಡಿವೈಎಸ್‌ಪಿ ಚಂದ್ರಶೇಖರ ಅವರು ರ‍್ಯಾಲಿಗೆ ಅನುಮತಿ ನಿರಾಕರಿಸಿದ್ದರೂ ಅದನ್ನು ನಡೆಸಲಾಗುವುದು. ದಲಿತರು ರ‍್ಯಾಲಿ ನಡೆಸಿದರೆ ಪ್ರತಿಯಾಗಿ ಹೋರಾಟ ನಡೆಸುತ್ತಾರೆ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವುದು ಸರಿಯಲ್ಲ. ಕಾನೂನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳುವ ಅಧಿಕಾರ ಪೊಲೀಸರಿಗಿದೆ. ಆದರೆ, ಪ್ರತಿಭಟನಾಕಾರರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಪೊಲೀಸರು ಅನುಮತಿ ನೀಡದಿದ್ದರೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಘಟನೆ ನಡೆದು ಹಲವು ದಿನಗಳಾದರೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಕಂದಾಯ ವ್ಯಾಪ್ತಿಗೆ ಬರುವ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅವರು ಸೌಜನ್ಯಕ್ಕಾದರೂ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆದಿದ್ದರೂ ಶಾಸಕರು ಸ್ಪಂದಿಸದಿರುವುದು ಖಂಡನೀಯ ಎಂದು ಮಾರೆಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿಮಾತನಾಡಿದರು. ಹೇಮರಾಜ ಅಸ್ಕಿಹಾಳ, ಎಂ.ಆರ್. ಭೇರಿ, ಶರಣಪ್ಪ ದಿನ್ನಿ, ಭೀಮಣ್ಣ ಮರ್ಚಟ್ಹಾಳ, ಜೈಭೀಮ ವಲ್ಲಭ್ ಹಾಗೂ ಲಕ್ಷ್ಮಣ ಕಲ್ಲೂರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X