Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಮಹಾತಪಸ್ವಿ ಶ್ರೀ...

Raichur | ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿಗೆ ಮೂವರು ಸಾಧಕರ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ12 Aug 2026 5:53 PM IST
share
Raichur | ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿಗೆ ಮೂವರು ಸಾಧಕರ ಆಯ್ಕೆ

ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಮಹಾಶೈವ ಧರ್ಮಪೀಠವು ಕೊಡಮಾಡುವ 2026ನೇ ಸಾಲಿನ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿಗಳಿಗೆ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂವರನ್ನು ಆಯ್ಕೆ ಮಾಡಲಾಗಿದೆ ಎಂದು ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿ ಸದಸ್ಯ ಬಸವರಾಜ ಸಿನ್ನೂರ ತಿಳಿಸಿದರು.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಶ್ರೀ ಮುಕ್ಕಣ್ಣ ಕರಿಗಾರ ಅವರು ತಮ್ಮ ಆಧ್ಯಾತ್ಮಿಕ ಗುರುಗಳಾದ ಧಾರವಾಡ ತಪೋವನದ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಅವರ ಹೆಸರಿನಲ್ಲಿ ನೂಲಹುಣ್ಣಿಮೆಯಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದಾರೆ ಎಂದರು.

ಸಾಹಿತ್ಯ ರತ್ನ ಪ್ರಶಸ್ತಿ :

ಕನ್ನಡದ ಹಿರಿಯ ವಿದ್ವಾಂಸ ಹಾಗೂ ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರನ್ನು 2026ನೇ ಸಾಲಿನ ‘ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸಾಹಿತ್ಯ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪತ್ರಿಕಾಭೂಷಣ ಪ್ರಶಸ್ತಿ :

‘ಪ್ರಜಾಪ್ರಸಿದ್ಧ’ ದಿನಪತ್ರಿಕೆಯ ಉಪಸಂಪಾದಕ ರಘುನಾಥರೆಡ್ಡಿ ಮನ್ಸಲಾಪುರ ಅವರಿಗೆ ‘ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾಭೂಷಣ’ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು ₹51 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಸೇವಾಭೂಷಣ ಪ್ರಶಸ್ತಿ :

ಗಮಕ ಕಲೆಯನ್ನು ನಾಡಿನಾದ್ಯಂತ ಪರಿಚಯಿಸುತ್ತಿರುವ ಖಾಸೀಮ್ ಮಲ್ಲಿಗೆ ಮಡುವು ಅವರನ್ನು ‘ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸೇವಾಭೂಷಣ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯೂ 51 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಆ.28ರಂದು ಪ್ರಶಸ್ತಿ ಪ್ರದಾನ :

ಆ.28ರಂದು ನೂಲಹುಣ್ಣಿಮೆಯ ಅಂಗವಾಗಿ ಮಹಾಶೈವ ಧರ್ಮಪೀಠದಲ್ಲಿ ನಡೆಯಲಿರುವ ‘ಮಹಾಶೈವ ಗುರುಪೂರ್ಣಿಮೆ’ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಆ.9ರಂದು ಶ್ರೀ ಮುಕ್ಕಣ್ಣ ಕರಿಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ ಎಂದು ಬಸವರಾಜ ಸಿನ್ನೂರ ತಿಳಿಸಿದರು.

2012ರಿಂದ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. 2025ನೇ ಸಾಲಿನ ಪ್ರಶಸ್ತಿಯನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ನೀಡಲಾಗಿತ್ತು. ಇದುವರೆಗೆ ಜಿ.ಎಸ್. ಶಿವರುದ್ರಪ್ಪ, ಬಿ.ಎ. ಸನದಿ, ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ, ಶಾಶ್ವತಸ್ವಾಮಿ ಮುಕ್ಕುಂದಿಮಠ, ಡಾ. ಚಂದ್ರಶೇಖರ ಕಂಬಾರ, ಎಚ್.ಎಸ್. ಶಿವಪ್ರಕಾಶ್ ಹಾಗೂ ಸಿದ್ಧರಾಮ ಹೊನ್ಕಲ್ ಸೇರಿದಂತೆ ಹಲವು ಗಣ್ಯರನ್ನು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಹಾಶೈವ ಧರ್ಮ ಪೀಠದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಡಾ.ಎನ್.ಎಚ್. ಪೂಜಾರ ಧಾರವಾಡ, ಸದಸ್ಯರಾದ ಎಚ್.ಎಚ್.ಮೇಟಿ ಧಾರವಾಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags

Mahatapasvi Sri Kumaraswami AwardRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X