Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಸಂಚಾರ ನಿಯಮ ಉಲ್ಲಂಘನೆ; 50...

ರಾಯಚೂರು: ಸಂಚಾರ ನಿಯಮ ಉಲ್ಲಂಘನೆ; 50 ಆಟೋಗಳನ್ನು ವಶಕ್ಕೆ ಪಡೆದ ಸಂಚಾರಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ2 July 2025 10:30 AM IST
share
ರಾಯಚೂರು: ಸಂಚಾರ ನಿಯಮ ಉಲ್ಲಂಘನೆ;  50 ಆಟೋಗಳನ್ನು ವಶಕ್ಕೆ ಪಡೆದ ಸಂಚಾರಿ ಪೊಲೀಸರು

ರಾಯಚೂರು: ನಗರದಲ್ಲಿ ಲೈಸನ್ಸ್ ಇಲ್ಲದೇ, ಸಮವಸ್ತ್ರ ಧರಿಸದೇ ಹಾಗೂ ಇತರೆ ಸಂಚಾರಿ ನಿಯಮಗಳನ್ನು ಪಾಲಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ 50 ಆಟೋಗಳನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದು ತಲಾ 500ರೂ ದಂಡ ವಿಧಿಸಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಆಟೊ ರಿಕ್ಷಾಗಳನ್ನು ನಿಲುಗಡೆ ಮಾಡದಂತೆ ಮತ್ತು ಹಲವು ಬಾರಿ ಎಚ್ಚರಿಕೆ ನೀಡಿದರೂ ಸಂಚಾರಿ ನಿಯಮ ಪಾಲಿಸದ ಕಾರಣ ಪೊಲೀಸರು ಆಟೊ ರಿಕ್ಷಾಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮುಂದೆ ಅನಧಿಕೃತ ಆಟೋಗಳನ್ನು ನಗರದಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಆಟೋ ಚಲಿಸದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ.

ಮೊದಲ ದಿನ ನಡೆಸಿದ ಕಾರ್ಯಾಚಣೆಯಲ್ಲಿ ದಾಖಲೆಗಳನ್ನು ಹೊಂದಿರದ 50 ಆಟೊ ರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ. ಅನೇಕ ಆಟೊಗಳಿಗೆ ಲೈಸನ್ಸ್, ಇನ್ಸುರೆನ್ಸ್, ಪರ್ಮಿಟ್ ಹೊಂದದೆ ಇರುವುದು, ವಾಹನ ಚಾಲನೆ ಮಾಡುವಾಗ ಸಮವಸ್ತ್ರ ಧರಿಸದೇ ಆಟೊ ಚಾಲನೆ ಮಾಡುವುದು ಕಂಡುಬಂದಿದ್ದು ಇದನ್ನು ಪೊಲೀಸರು ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

ಮೊದಲ ದಿನ ರೂ.25 ಸಾವಿರ ದಂಡ ವಸೂಲಿ: ಸಂಚಾರಿ ನಿಯಮ ಪಾಲನೆಗೆ ಮುಂದಾಗದ ಆಟೋ ಚಾಲಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರ ಹೊರತಾಗಿ ಸುಧಾರಣೆ ಮಾಡದ ಕಾರಣ ಜುಲೈ 1 ರಿಂದ ತಿಂಗಳ ಪೂರ್ತಿ ಕಾರ್ಯಾಚರಣೆಗೆ ಇಳಿದ ಸಂಚಾರಿ ಪೊಲೀಸರು ನೋಪಾರ್ಕಿಂಗ್ (ಪಾರ್ಕಿಂಗ್ ಇಲ್ಲದ ಕಡೆ) ಆಟೊಗಳನ್ನು ನಿಲುಗಡೆ ಮಾಡಿ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದ ಆಟೊಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಖಲೆ ಹೊಂದಿಲ್ಲ. 50 ಆಟೊ ಚಾಲಕರಿಗೆ ತಲಾ 500 ದಂಡ ವಿಧಿಸಿದ್ದು ಒಟ್ಟು ರೂ.25 ಸಾವಿರ ದಂಡ ಸಂಗ್ರಹ ಮಾಡಲಾಗಿದೆ ಎಂದು ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸಣ್ಣ ಈರೇಶ ಅವರು ತಿಳಿಸಿದ್ದಾರೆ.

ವಾಹನಗಳ ಸರಿಯಾಗಿ ದಾಖಲೆ ಇಟ್ಟುಕೊಳ್ಳದ ಹಾಗೂ ಲೈಸನ್ಸ್ ಹೊಂದಿರದ ಚಾಲಕರ ಆಟೊ ರಿಕ್ಷಾಗಳಲ್ಲಿ ಪಾಲಕರು ತಮ್ಮ ಮಕ್ಕಳನ್ನು ಕಳಿಸಬಾರದು ಮನವಿ ಎಂದು ಮಾಡಿಕೊ ಳ್ಳುವುದು ಸಹ ಇನ್ನು ಅನಿವಾ ರ್ಯವಾಗಲಿದೆ ಎಂದು ಆಟೊ ಚಾಲಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಆಟೋಗಳನ್ನು ವಶಕ್ಕೆ ಪಡೆದ ನಂತರ ಎಲ್ಲಾ ಆಟೋ ಚಾಲಕರು ಸಂಚಾರಿ ಪೊಲೀಸ್ ಠಾಣೆಗೆ ಜಮಾಯಿಸಿದ್ದು ಎಷ್ಟೇ ಮನವಿ ಮಾಡಿದರೂ ನೀಡದೇ 500 ರೂ ದಂಡ ಪಾವತಿಸಿಕೊಂಡು ಬಳಿಕ ಆಟೋಗಳನ್ನು ನೀಡಲಾಯಿತು.

'ಆಟೊ ಚಾಲಕರು ಕಡ್ಡಾಯವಾಗಿ ಪರ್ಮಿಟ್ ಪಡೆದುಕೊ-ಳ್ಳಬೇಕು. ಪ್ರಯಾಣಿಕರ ಹಿತದೃಷ್ಟಿಯಿಂದ ಇನ್ಸುರೆನ್ಸ್ ಮಾಡಬೇಕು. ಕೆಲವರು ಮಾಲೀಕತ್ವ ವರ್ಗಾವಣೆ ಮಾಡಿಕೊಂಡಿಲ್ಲ. ಪರವಾನಗಿ ಸಹ ಪಡೆದುಕೊಂಡಿಲ್ಲ. ಲೈಸನ್ಸ್ ಇಲ್ಲದೇ ಆಟೊ ರಿಕ್ಷಾ ಚಲಾಯಿಸುವುದು ನಿಯ-ಮಬಾಹಿರವಾಗಿದೆ' ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್‌ಸ್ಪೆಕ್ಟ‌ರ್ ಪ್ರವೀಣ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X