Raichur | ಅನಧಿಕೃತ ವಿದ್ಯುತ್ ಬಳಕೆ: 162 ಪ್ರಕರಣ ಪತ್ತೆ, 14.98 ಲಕ್ಷ ರೂ. ದಂಡ

ಸಾಂದರ್ಭಿಕ ಚಿತ್ರ | Photo credit : AI
ರಾಯಚೂರು: ರಾಯಚೂರು ಜಿಲ್ಲಾದ್ಯಂತ ಅಕ್ಟೋಬರ್ 2026ರಲ್ಲಿ ಜೆಸ್ಕಾಂ ಅಧಿಕಾರಿಗಳು ಹಾಗೂ ಜಾಗೃತ ದಳದವರು ಕಾರ್ಯಾಚರಣೆ ನಡೆಸಿ, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿದ್ದ ಒಟ್ಟು 162 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 14.98 ಲಕ್ಷ ರೂ. ದಂಡ ವಿಧಿಸಲಾಗಿದೆ.
ಜಿಲ್ಲೆಯಲ್ಲಿ ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು ತಕ್ಷಣವೇ ತಮ್ಮ ಸ್ಥಾವರಗಳಿಗೆ ಮೀಟರ್ ಅಳವಡಿಸಿಕೊಂಡು ವಿದ್ಯುತ್ ಬಳಕೆಯನ್ನು ಸಕ್ರಮಗೊಳಿಸಿಕೊಳ್ಳಬೇಕು. ಬಾಕಿ ಇರುವ ಸ್ಥಾವರಗಳ ಗ್ರಾಹಕರು ಕೂಡಲೇ ಬಾಕಿ ಮೊತ್ತವನ್ನು ಪಾವತಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಅನಧಿಕೃತ ಸ್ಥಾವರಗಳಿಗೆ ಹೆಚ್ಚಿನ ದಂಡ ವಿಧಿಸುವುದರ ಜತೆಗೆ ಕಾಯ್ದೆಯ ಪ್ರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




