Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ರಾಷ್ಟ್ರಮಟ್ಟದ ಅಥ್ಲೆಟಿಕ್ಸ್:...

ರಾಯಚೂರು | ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: 11ನೇ ಸ್ಥಾನ ಪಡೆದ ವಾಲ್ಮೀಕಿ ವಿಶ್ವವಿದ್ಯಾಲಯ

ವಾರ್ತಾಭಾರತಿವಾರ್ತಾಭಾರತಿ20 Jan 2026 12:48 PM IST
share
ರಾಯಚೂರು | ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: 11ನೇ ಸ್ಥಾನ ಪಡೆದ ವಾಲ್ಮೀಕಿ ವಿಶ್ವವಿದ್ಯಾಲಯ

ರಾಯಚೂರು : ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆದ 85ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು 11ನೇ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ವಿಜೇತ ಕ್ರೀಡಾಪಟುಗಳನ್ನು ಅಭಿನಂದಿಸಿ ಮಾತನಾಡಿದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ, ದೇಶದ 306 ವಿಶ್ವವಿದ್ಯಾಲಯಗಳು ಪಾಲ್ಗೊಂಡಿದ್ದ ಈ ಬೃಹತ್ ಕ್ರೀಡಾಕೂಟದಲ್ಲಿ ನಮ್ಮ ವಿವಿ 11ನೇ ಸ್ಥಾನ ಪಡೆದಿರುವುದು ಅತ್ಯಂತ ಸಂತಸದ ವಿಷಯ. ಯುವ ಕ್ರೀಡಾಪಟುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ನಮ್ಮ ವಿಶ್ವವಿದ್ಯಾಲಯವು ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ತಿಳಿಸಿದರು.

ಕುಲಸಚಿವ ಡಾ.ಎ.ಚನ್ನಪ್ಪ ಕೆ.ಎ.ಎಸ್ ಮಾತನಾಡಿ, ರಾಷ್ಟ್ರಮಟ್ಟದ ಅಂತರ್ ವಿವಿಗಳ ಅಥ್ಲೆಟಿಕ್ ಕ್ರೀಡಾಕೀಟದಲ್ಲಿ ಇಲ್ಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಓಟ, ರಿಲೇ, ಮ್ಯಾರಥಾನ್‍ಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ವಾಲ್ಮೀಕಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ನಾನಾ ಕಾಲೇಜಿನ ವಿದ್ಯಾರ್ಥಿಗಳಾದ ಸೋನಿ ದೇವಿ 5 ಸಾವಿರ ಮೀಟರ್ ಓಟದಲ್ಲಿ ಚಿನ್ನದ ಪದಕ, ಪ್ರಿನ್ಸ್‍ರಾಜ್ ಯಾದವ್ 10 ಸಾವಿರ ಸಾವಿರ ಮೀಟರ್ ಓಟದಲ್ಲಿ ಕಂಚಿನ ಪದಕ ಮತ್ತು 5 ಸಾವಿರ ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಖುಷ್ಬೂ ಪಾಟೀಲ್ ಹಾಫ್ ಮ್ಯಾರಥಾನ್ ಓಟದಲ್ಲಿ ಕಂಚಿನ ಪದಕ ಮತ್ತು 4x100 ಮೀ ಮೀಟರ್ ರಿಲೇ ಓಟದಲ್ಲಿ ಗೌರಮ್.ಎಂ., ನವೀನ್ .ವಿ., ಮಾರ್ಕ್ ಆ್ಯಂಥೋನಿ ಡಿಕೋಸ್ಟ್, ಶರಣದೀಪ್.ಕೆ.ಪಿ. ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಶೀಘ್ರದಲ್ಲೇ ಸೂಕ್ತ ಬಹುಮಾನ ಹಾಗೂ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸುವುದಾಗಿ ಕುಲಸಚಿವರು ಭರವಸೆ ನೀಡಿದರು.

ಕುಲಸಚಿವ (ಮೌಲ್ಯಮಾಪನ) ಡಾ. ಜ್ಯೋತಿ ಧಮ್ಮ ಪ್ರಕಾಶ್ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಾಲ್ಮೀಕಿ ವಿವಿ ತನ್ನದೇ ಆದ ಛಾಪನ್ನು ಮೂಡಿಸುತ್ತಿದ್ದು, ಕ್ರೀಡಾಪಟುಗಳ ಈ ಸಾಧನೆ ಹೆಮ್ಮೆ ತಂದಿದೆ ಎಂದರು.

ಕ್ರೀಡಾ ವಿಭಾಗದ ನಿರ್ದೇಶಕಿ ಡಾ. ಲತಾ ಎಂ.ಎಸ್. ಮಾತನಾಡಿ, ನಮ್ಮ ವಿವಿಯ 22 ಪುರುಷ ಹಾಗೂ 9 ಮಹಿಳಾ ಕ್ರೀಡಾಪಟುಗಳು ಈ ಕೂಟದಲ್ಲಿ ಭಾಗವಹಿಸಿದ್ದರು. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ವಿವಿಗಳನ್ನು ಸರಿಗಟ್ಟಿ ಪದಕಗಳ ಪಟ್ಟಿಯಲ್ಲಿ ವಾಲ್ಮೀಕಿ ವಿವಿ ಮುಂಚೂಣಿಯಲ್ಲಿರುವುದು ಗಮನಾರ್ಹ ಎಂದರು.

ಉಪಕುಲಸಚಿವರು, ನಿಕಾಯಗಳ ಡೀನರು, ಅಧಿಕಾರಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Tags

athleticsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X