ರಾಯಚೂರು | ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಖಚಿತ : ಮಾಜಿ ಸಚಿವ ಶಿವನಗೌಡ ನಾಯಕ
ಸಾಮೂಹಿಕ ವಿವಾಹ ಕಾರ್ಯಕ್ರಮ

ರಾಯಚೂರು : ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಗಳಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ ಹೇಳಿದರು.
ಮಾನವಿ ಪಟ್ಟಣದಲ್ಲಿ ಕೆ ಎಸ್ ಎನ್ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಗೆ ಏಮ್ಸ್ ಮಂಜೂರು ಮಾಡಿಸಿದ್ದಲ್ಲಿ ಭಾನುವಾರ ಈ ಭಾಗದ ಜನರಿಗೆ ಅನುಕೂಲವಾಗುವುದಲ್ಲದೆ ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರಂತೆ ಹೆಸರು ಉಳಿಯಲು ಸಾಧ್ಯವಾಗುತ್ತದೆ.
ಜಿಲ್ಲೆಯಲ್ಲಿ ವಿಮ್ಸ್ ಸ್ಥಾಪಿಸುವಂತೆ ನಡೆಯುತ್ತಿರುವ ಹೋರಾಟ ಸಾವಿರ ದಿನಗಳನ್ನು ತಲುಪುತ್ತಿದ್ದು, ಈಗಾಗಲೇ ಜಿಲ್ಲೆಯನ್ನು ಕಡೆಗಣಿಸಲಾಗುತ್ತಿದ್ದು, ಹಿಂದುಳಿದ ಜಿಲ್ಲೆಯೆಂಬ ಹಣೆಪಟ್ಟಿಯಿದೆ. ಇದನ್ನು ಅಳಿಸಬೇಕಾದರೇ ಹಾಗೂ ಜಿಲ್ಲೆಯ ಅಭಿವೃದ್ಧಿಯಾಗಬೇಕಾದರೆ ಜಿಲ್ಲೆಗೆ ಏಮ್ಸ್ ಮಂಜೂರು ಮಾಡಿಸುವುದು ಅತ್ಯಗತ್ಯ ಎಂದು ಹೇಳಿದರು.
ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಸಾಮಾಜಿಕ ಸೇವೆಯ ಜೊತೆಗೆ ವಿಜಯೇಂದ್ರ ಅವರಿಗೆ ಏಮ್ಸ್ ತರುವ ಜವಾಬ್ದಾರಿಯನ್ನೂ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಠಾಧೀಶರಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಪ್ರಸನ್ನಾನ್ನಾನಂದಪುರಿ ಸ್ವಾಮೀಜಿ, ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ, ಶಾಸಕ ಬಿ.ವೈ.ವಿಜಯೇಂದ್ರ, ಶಾಸಕ ಜನಾರ್ಧನರೆಡ್ಡಿ, ದೊಡ್ಡನಗೌಡ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಸಚಿವ ಬೈರತಿ ಸುರೇಶ, ಹನುಮಂತಪ್ಪ ಆಳ್ಕೊಡ್, ಶಾಸಕ ಡಾ.ಶಿವರಾಜ ಪಾಟೀಲ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ತಿಪ್ಪರಾಜು ಹವಾಲ್ದಾರ್, ತಿಮ್ಮಾರೆಡ್ಡಿ ಭೋಗಾವತಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಎಂ.ಈರಣ್ಣ, ಬಾಲಸ್ವಾಮಿ ಕೊಡ್ಲಿ, ಸೇರಿದಂತೆ ಇತರರಿದ್ದರು.







