Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಒಂದು ವಾರದ ಆಕಾಂಕ್ಷ ಹಾತ್...

ರಾಯಚೂರು | ಒಂದು ವಾರದ ಆಕಾಂಕ್ಷ ಹಾತ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ: ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹಬ್ಬದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ25 Aug 2025 9:37 PM IST
share
ರಾಯಚೂರು | ಒಂದು ವಾರದ ಆಕಾಂಕ್ಷ ಹಾತ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ: ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹಬ್ಬದ ಸಂಭ್ರಮ

ರಾಯಚೂರು: ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಹತ್ತಿರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಆ.25ರಂದು ಹಬ್ಬದ ಸಂಭ್ರಮ ಕಾಣುತ್ತಿದೆ. ಸ್ಥಳೀಯ ಸಾಂಪ್ರದಾಯಿಕ ಉತ್ಪನ್ನಗಳನ್ನು ಉತ್ತೇಜಿಸುವ ಆಕಾಂಕ್ಷ ಹಾತ್ ಕಾರ್ಯಕ್ರಮದಡಿ ಉದ್ಯಾನವನದಲ್ಲಿ ಸುಮಾರು 23 ಸ್ಟಾಲ್‌ಗಳನ್ನು ಹಾಕಲಾಗಿದ್ದು, ಬಗೆಬಗೆಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಜನಮನ ಸೆಳೆಯುತ್ತಿದೆ.

ಮೊದಲ ದಿನ ಬೆಳಗ್ಗೆಯಿಂದ ಸಂಜೆ ವೇಳೆಗೆ ಸುಮಾರು 2,500ಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದು, ಈ ಕಾರ್ಯಕ್ರಮದ ವಿಶೇಷತೆಯಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷೆ ಮತ್ತು ಮಹತ್ವಾಕಾಂಕ್ಷೆ ತಾಲೂಕು ಕಾರ್ಯಕ್ರಮದಡಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ದೇಶದ ಆರ್ಥಿಕತೆಯಲ್ಲಿ ಹಾಗೂ ಸದೃಢ ದೇಶ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರು ಮನೆಯಲ್ಲಿ ಉತ್ಪಾದನೆ ಮಾಡಿದ ದೇಶಿ ಮತ್ತು ಸಾಂಪ್ರದಾಯಿಕ ಉತ್ಪನ್ನಗಳನ್ನು ಪ್ರೋತ್ಸಾಹಿಸಬೇಕೆಂದರು.

ಇಂದಿನಿಂದ ಆ.30ರವರೆಗೆ ಸುಮಾರು ಒಂದು ವಾರಗಳ ಕಾಲ ನಡೆಯುವ ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಹೆಚ್ಚು ಗ್ರಾಹಕರನ್ನು ಸೆಳೆಯಬೇಕು. ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ಮಾರಾಟ ಮಾಡಿ ಆರ್ಥಿಕ ಸ್ವಾವಲಂಬಿಗಳಾಗಿ ಮತ್ತೊಬ್ಬರಿಗೆ ಮಾದರಿಯಾಗಬೇಕು. ಸ್ವಯಂ ಉದ್ಯಮಿಗಳಾಗಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ್ ರಾಣಿ ಅವರು ಮಾತನಾಡಿ, ದೇಶದ ಶೇ.60ರಷ್ಟು ಆರ್ಥಿಕ ಶಕ್ತಿಯು ಅದು ಮನೆಮನೆಗಳಿಂದಲೇ ಸಾಧ್ಯಾಗುತ್ತಿದೆ. ಮನೆಯಲ್ಲಿಯೇ ಉತ್ಪಾದನೆ ಮಾಡುವ ಉತ್ಪನ್ನಗಳಿಗೆ ಬ್ರಾಂಡ್ ಇಲ್ಲದೇ ಇರುವುದರಿಂದ ಮಾರಾಟ ವ್ಯವಸ್ಥೆ ಸವಾಲಿನಂತಾಗಿರುತ್ತದೆ. ಉತ್ಪನ್ನಕ್ಕೆ ಒಂದು ಹೆಸರು ಕೊಟ್ಟು ಇಂತಹ ಮೇಳದಲ್ಲಿ ಪರಿಚಯಿಸಬೇಕು. ಮಹಿಳೆಯರು ಉತ್ತಮ ಅಡುಗೆ ಕೌಶಲ್ಯ ಬೆಳೆಸಿಕೊಂಡು ಸಾಂಪ್ರದಾಯಿಕ ರೀತಿಯಲ್ಲಿ ಮಾಡಿದಲ್ಲಿ ಉತ್ತಮ ರೀತಿಯ ಮಾರುಕಟ್ಟೆ ಸಿಕ್ಕು ಸ್ವಾವಲಂಬಿಗಳಾಗಿ ಆರ್ಥಿಕ ಸದೃಢರಾಗಲು ಸಾಧ್ಯವೆಂದರು.

ಈ ವೇಳೆ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕರಾದ ಡಾ.ಟಿ.ರೋಣಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಧಿಕಾರಿ ಜಿ.ಯು.ಹುಡೇದ್, ಉದ್ಯೋಗ ವಿನಿಮಯ ಅಧಿಕಾರಿ ನವೀನ್ ಕುಮಾರ, ಸ್ವ-ಸಹಾಯ ಗುಂಪುಗಳ ತಾಲೂಕು ಅಧ್ಯಕ್ಷೆ ಲಲಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ವ-ಸಹಾಯ ಗುಂಪುಗಳ ಮಹಿಳೆಯರು ಮೇಳದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X