Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಆರೋಗ್ಯ ಇಲಾಖೆಯಲ್ಲಿ ʼಕೂಲಿ...

Raichur | ಆರೋಗ್ಯ ಇಲಾಖೆಯಲ್ಲಿ ʼಕೂಲಿ ಕಳ್ಳತನʼ : ಆರ್.ಮಾನಸಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2026 12:10 PM IST
share
Raichur | ಆರೋಗ್ಯ ಇಲಾಖೆಯಲ್ಲಿ ʼಕೂಲಿ ಕಳ್ಳತನʼ : ಆರ್.ಮಾನಸಯ್ಯ ಆರೋಪ

ರಾಯಚೂರು : ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರ ಶ್ರಮವನ್ನು ವ್ಯವಸ್ಥಿತವಾಗಿ ಶೋಷಣೆ ಮಾಡಲಾಗುತ್ತಿದ್ದು, ಭಾರಿ ಪ್ರಮಾಣದ “ಕೂಲಿ ಕಳ್ಳತನ” ನಡೆಯುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿ ಮತ್ತು ಡಿ ವೃಂದದ ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆರ್‌. ಮಾನಸಯ್ಯ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಸುಮಾರು 30,00,449 ರೂ. ಕೂಲಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಹೊರಗುತ್ತಿಗೆ ಸಂಸ್ಥೆಗಳು ಸೇರಿಕೊಂಡು ದುರುಪಯೋಗಪಡಿಸಿಕೊಂಡಿವೆ ಎಂದು ದೂರಿದರು. ಹೊರಗುತ್ತಿಗೆ ಪದ್ಧತಿ ಅಗ್ಗದ ದರದಲ್ಲಿ ಶ್ರಮಶಕ್ತಿಯನ್ನು ಖರೀದಿಸಿ ಕಾರ್ಮಿಕರ ಕೂಲಿಯನ್ನು ಕಸಿದುಕೊಳ್ಳುವ ವ್ಯವಸ್ಥೆಯಾಗಿದೆ ಎಂದು ಕಿಡಿಕಾರಿದರು.

ವಿಭಾಗದ ಖಾಲಿ ಹುದ್ದೆಗಳಿಗೆ ಕಾನೂನುಬಾಹಿರವಾಗಿ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಪ್ರತಿಯೊಬ್ಬ ಅಭ್ಯರ್ಥಿಯಿಂದ 1 ಲಕ್ಷ ರೂ. ದಿಂದ 2 ಲಕ್ಷ ರೂ. ವರೆಗೆ ಲಂಚ ಪಡೆಯಲಾಗಿದ್ದು, ಶಾಸಕರು ಹಾಗೂ ಸಚಿವರ ಶಿಫಾರಸಿನ ಮೇರೆಗೆ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಿದರು.

ಪ್ರತಿ ವರ್ಷ ಹೊರಗುತ್ತಿಗೆ ಏಜೆನ್ಸಿಗಳು ಬದಲಾಗುವ ಸಂದರ್ಭದಲ್ಲಿ ನೌಕರರಿಂದ ಸರಾಸರಿ 25 ಸಾವಿರ ರೂ. ವರೆಗೆ ಕಮಿಷನ್ ವಸೂಲಿ ಮಾಡಲಾಗುತ್ತಿದೆ. ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ 119 ಡಿ ಗ್ರೂಪ್ ಸಿಬ್ಬಂದಿ, 34 ನಾನ್ ಕ್ಲಿನಿಕಲ್ ಸಿಬ್ಬಂದಿ, 17 ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು ಸೇರಿದಂತೆ ಒಟ್ಟು 228 ಹೊರಗುತ್ತಿಗೆ ನೌಕರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಈ ನೌಕರರಿಗೆ ಕಳೆದ 9 ತಿಂಗಳಿಂದ ಸಂಬಳ ಪಾವತಿಯಾಗಿಲ್ಲ. 2025ರ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ಹಾಗೂ 2026ರ ಜನವರಿಯಿಂದ ಏಪ್ರಿಲ್‌ವರೆಗಿನ ಒಟ್ಟು 8 ತಿಂಗಳ ಬಾಕಿ ವೇತನ ಸುಮಾರು 1,33,38,088 ರೂ. ನೀಡದೆ ವಂಚಿಸಲಾಗಿದೆ ಎಂದು ದೂರಿದರು.

ಕನಿಷ್ಠ ವೇತನ ಕಾಯ್ದೆ, ಸಾಮಾಜಿಕ ಭದ್ರತೆ ಹಾಗೂ ಉದ್ಯೋಗ ಭದ್ರತೆಗಳು ಈ ಕಾರ್ಮಿಕರ ಪಾಲಿಗೆ ಗಗನಕುಸುಮಗಳಾಗಿವೆ. “ಸರ್ಕಾರಿ ನೌಕರಿ” ಎಂಬ ಆಸೆಗಾಗಿ ಹೊರಗುತ್ತಿಗೆ ನೌಕರರು ಜೀವಂತ ಜೀತದಾಳುಗಳಂತೆ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಲಿ ಕೇಳಿದ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಈಗಾಗಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಕೂಡಲೇ ಬಾಕಿ ವೇತನ ಪಾವತಿಸಿ, ತಪ್ಪಿತಸ್ಥ ಏಜೆನ್ಸಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ನ್ಯಾಯ ಸಿಗುವವರೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಟಿ.ಯು.ಸಿ.ಐ ರಾಜ್ಯ ಕಾರ್ಯದರ್ಶಿ ಎಂ. ಗಂಗಾಧರ, ಅಧ್ಯಕ್ಷ ಶಂಕ್ರಪ್ಪ ಗುಂಡಸಾಗರ, ಉಪಾಧ್ಯಕ್ಷ ಆಂಜನೇಯ ಅರಕೇರ, ಅಮರೇಶ ಬಡಿಗೇರ, ಯಲ್ಲಪ್ಪ ಅನ್ವರಿ, ಜಗದೀಶ್ ಹಾಗೂ ನಾಗಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X