Raichur | ಅ.8ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ರಾಯಚೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 8ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ನೇರ ಸಂದರ್ಶನದಲ್ಲಿ ಎರಡು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲಿವೆ.
ಅರ್ಹತೆ :
ಎಲ್ಲಾ ಪದವೀಧರರು ಹಾಗೂ 18ರಿಂದ 26 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝೆರಾಕ್ಸ್ ಪ್ರತಿಗಳು, ಬಯೋಡೇಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳನ್ನು ತರಬೇಕು.
ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲ ಮಹಡಿ, ಗೂಡ್‌ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಅಥವಾ ದೂರವಾಣಿ ಸಂಖ್ಯೆ 08532-231684, 9008211750, 8197930236ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






