ರಾಯಚೂರು | ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವೃದ್ಧಾಶ್ರಮದಲ್ಲಿ ಮಹಿಳಾ ದಿನಾಚರಣೆ

ರಾಯಚೂರು: ಇಲ್ಲಿನ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ರಾಯಚೂರಿನ ವೃದ್ಧಾಶ್ರಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಲಾಯಿತು.
ಈ ವೇಳೆ ಆಶ್ರಮದಲ್ಲಿನ ಹಿರಿಯ ನಾಗರಿಕರಿಗೆ ಹಣ್ಣುಗಳು ಮತ್ತು ಆಹಾರವನ್ನು ವಿತರಿಸಿತು.
ಈ ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಮೇಲಿನ ಪ್ರೀತಿ, ಗೌರವ ಮತ್ತು ಕಾಳಜಿಯನ್ನು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು. ಸಮಿತಿಯ ಸದಸ್ಯರು ವೃದ್ಧಾಶ್ರಮದ ನಿವಾಸಿಗಳೊಂದಿಗೆ ಸಮಯ ಕಳೆಯುತ್ತಾ, ಅವರೊಂದಿಗೆ ಮಾತುಕತೆ ನಡೆಸಿ ಅವರಿಗೆ ಸಂತೋಷ ಮತ್ತು ಧೈರ್ಯ ನೀಡಿದರು. ಹಣ್ಣುಗಳು ಮತ್ತು ಆಹಾರವನ್ನು ಪ್ರೀತಿ ಮತ್ತು ಆತ್ಮೀಯತೆಯಿಂದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯರು, ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಆಚರಿಸುವ ದಿನ ಮಾತ್ರವಲ್ಲದೆ, ಸಮಾಜದಲ್ಲಿ ಮಾನವೀಯತೆ, ಸೇವಾಭಾವನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವ ಅವಕಾಶವೂ ಆಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಸಮೀನಾ ಮ್ಯಾಡಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾದಿಯಾ ಮ್ಯಾಡಮ್, ಜಿಲ್ಲಾ ಕಾರ್ಯದರ್ಶಿ ಶಾಹಿದಾ ಮ್ಯಾಡಮ್ ಮತ್ತು ಕಾರ್ಯಕರ್ತೆ ನಸ್ರೀನ್ ಮ್ಯಾಡಮ್ ಉಪಸ್ಥಿತರಿದ್ದರು.





