Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪೊಲೀಸರಿಂದ ಅವಮಾನ, ಹಣ...

ರಾಯಚೂರು | ಪೊಲೀಸರಿಂದ ಅವಮಾನ, ಹಣ ನೀಡುವಂತೆ ಬೆದರಿಕೆ ಆರೋಪ: ಎಸ್‌ಪಿ ಮೊರೆ ಹೋದ ಯುವಕ

ಪೊಲೀಸರಿಂದ ನನಗೆ ರಕ್ಷಣೆ ನೀಡಬೇಕು ಎಂದು ದೂರಿತ್ತ ಯುವಕ

ವಾರ್ತಾಭಾರತಿವಾರ್ತಾಭಾರತಿ1 Aug 2025 12:00 AM IST
share
ರಾಯಚೂರು | ಪೊಲೀಸರಿಂದ ಅವಮಾನ, ಹಣ ನೀಡುವಂತೆ ಬೆದರಿಕೆ ಆರೋಪ: ಎಸ್‌ಪಿ ಮೊರೆ ಹೋದ ಯುವಕ

ರಾಯಚೂರು : ಪೊಲೀಸರ ಮಾನಸಿಕ ಹಿಂಸೆಯಿಂದ ನೊಂದ ಯುವಕನೊರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮೊರೆ ಹೋದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಪ್ರೇಮಿಗಳಿಬ್ಬರ ಕುರಿತು ಸಂಧಾನದ ಮೂಲಕ ಇತ್ಯಾರ್ಥಗೊಂಡಿರುವ ಪ್ರಕರಣವನ್ನಿಟ್ಟುಕೊಂಡು ಪೊಲೀಸರು ಮಾನಸಿಕ ಹಿಂಸೆ ನೀಡಿ ಹಣದ ಬೇಡಿಕೆ ಇಡುತ್ತಿದ್ದಾರೆ ಎಂದು ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಯುವಕನೋರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಮಾವಿನಭಾವಿ ಗ್ರಾಮದ ನಿವಾಸಿಯಾದ ಯುವಕ ಅದೇ ಗ್ರಾಮದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಮುದಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಠಾಣೆಯಲ್ಲಿ ರಾಜಿ ಸಂಧಾನ ನಡೆದಿದೆ. ತಾವೇ ಸಂಧಾನದ ಮೂಲಕ ಅಂತ್ಯಗೊಳಿಸಿ, ಈಗ ಈ ಪ್ರಕರಣವನ್ನು ಇಟ್ಟುಕೊಂಡು ಮುದಗಲ್ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ವೀರಭದ್ರಪ್ಪ, ಶರಣಪ್ಪ ಹಾಗೂ ರಾಮಪ್ಪ ಪ್ರತಿ ದಿನ ದೂರವಾಣಿ ಕರೆಗಳನ್ನು ಮಾಡಿ ಹಣದ ಬೇಡಿಕೆ ಇಡುತ್ತಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಜೂ.20 ರಂದು ಮುದಗಲ್ ಠಾಣೆಗೆ ಕರೆಸಿದ ಪೊಲೀಸರು ನನ್ನ ಬಟ್ಟೆಗಳನ್ನು ಬಿಚ್ಚಿಸಿ ಅವಮಾನ ಮಾಡಿದ್ದಾರೆ. ನನ್ನನ್ನು ಊಟಕ್ಕೆಂದು ಮುದಗಲ್‌ ನ ಚಂದನ ಡಾಬಾಗೆ ಕರೆದುಕೊಂಡು ಹೋಗಿ ಅಲ್ಲಿ ಮದ್ಯಪಾನ ಊಟ ಮಾಡಿ 1,142 ರೂ. ಗಳನ್ನು ನನ್ನಿಂದಲೇ ಪಾವತಿಕೊಂಡಿದ್ದಲ್ಲದೆ, ಪೆಟ್ರೋಲ್‌ ಗಾಗಿ 500 ರೂ. ಗಳನ್ನೂ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಬಲವಂತವಾಗಿ ಮೊಬೈಲ್‌ ಫೋನ್ ಕಸಿದುಕೊಂಡು ಫೋನ್‌ ಪೇ ನಲ್ಲಿದ್ದ 8,000 ರೂ. ಗಳನ್ನು ಬೇರೆಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಅಷ್ಟೇ ಅಲ್ಲದೇ ನೀನಿನ್ನೂ ಹಣವನ್ನು ಪಾವತಿಸಬೇಕು. ಪಾವತಿಸದಿದ್ದರೆ ಇತ್ಯರ್ಥಗೊಂಡಿರುವ ಪ್ರಕರಣದಲ್ಲಿ ಮತ್ತೊಮ್ಮೆ ನಿನ್ನನ್ನೇ ತಪ್ಪಿತಸ್ಥನೆಂದು ಬಿಂಬಿಸಿ ಎಫ್ಐಆರ್ ದಾಖಲಿಸುತ್ತೇವೆ ಎಂದು ಪ್ರತಿದಿನ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಪೊಲೀಸರಿಂದ ನನಗೆ ರಕ್ಷಣೆ ನೀಡಬೇಕು ಎಂದು ಯುವಕ ಎಸ್‌ ಪಿ ಅವರ ಬಳಿ ಮನವಿ ಮಾಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X