Raichur | ಪಂಪ್‌ಸೆಟ್ ಆನ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

ದೇವದುರ್ಗ : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಶಿವು (18) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ವೇಳೆ ಪಂಪ್‌ಸೆಟ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಾಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಾಲಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story




