Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಸೈಬರ್ ಅಪರಾಧಗಳಿಗೆ ಯುವಕರು...

ರಾಯಚೂರು | ಸೈಬರ್ ಅಪರಾಧಗಳಿಗೆ ಯುವಕರು ಬಲಿ : ಜಾಗೃತರಾಗಲು ನ್ಯಾ.ಮಾರುತಿ ಬಗಾಡೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ29 Oct 2025 7:55 PM IST
share
ರಾಯಚೂರು | ಸೈಬರ್ ಅಪರಾಧಗಳಿಗೆ ಯುವಕರು ಬಲಿ : ಜಾಗೃತರಾಗಲು ನ್ಯಾ.ಮಾರುತಿ ಬಗಾಡೆ ಸಲಹೆ

ರಾಯಚೂರು : ಸೈಬರ್ ಅಪರಾಧಗಳಿಗೆ ಯುವಕರು ಮತ್ತು ವಿದ್ಯಾವಂತರೇ ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಮಾರುತಿ ಬಗಾಡೆ ಹೇಳಿದರು.

ಅವರಿಂದು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಸೈಬರ್ ಅಪರಾಧ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಿಂದೆ ಶಾಲೆಗೆ ಅಕ್ಷರ ಕಲಿಯಲು ಹೋಗುತ್ತಿದ್ದರು. ಆದರೆ ಪ್ರಸ್ತುತ ಕಂಪ್ಯೂಟರ್ ಶಿಕ್ಷಣವನ್ನು ವಂಚನೆ ಮಾಡಲು, ಹೇಗೆ ಕಳ್ಳತನ ಮಾಡಬೇಕು ಎಂದು ಕಲಿಯಲು ಶಿಕ್ಷಣ ಪಡೆಯಲಾಗುತ್ತಿದೆ. ಬಲಿಪಶು ಮಾಡುವವರು ವಿದ್ಯಾವಂತರೆ, ಬಲಿಪಶು ಆಗುತ್ತಿರುವವರೂ ವಿದ್ಯಾವಂತರೆ ಆಗಿದ್ದಾರೆ ಎಂದರು.

ಇತ್ತೀಚೆಗೆ ರಾಯಚೂರು ಪೊಲೀಸರು ಸೈಬರ್ ವಂಚನೆಯೊಂದನ್ನು ಪತ್ತೆ ಹಚ್ಚಿ 18 ಲಕ್ಷ ರೂ. ಜಪ್ತಿ ಪಡಿಸಿಕೊಂಡಿದ್ದಾರೆ. ಸೈಬರ್ ಪೊಲೀಸರು ಅಪರಾಧಗಳನ್ನು ತಡೆಗಟ್ಟಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಟಿಎಂ ಬ್ಲಾಕ್ ಆಗಿದೆ ಎಂದು ಬ್ಯಾಂಕ್ ನಿಂದ ಕರೆ ಬರುವುದು ಇದೆಲ್ಲ ಸೈಬರ್ ವಂಚನೆಯ ಪ್ರಮುಖ ವಿಷಯಗಳಾಗಿವೆ ಎಂದರು.

ವಾಟ್ಸ್ಯಾಪ್ ಮೂಲಕವೂ ವಿಡಿಯೋ ಕರೆಗಳನ್ನು ಮಾಡಿ, ಸಂದೇಶಗಳನ್ನು ಕಳಿಸಿ ಸೈಬರ್ ವಂಚಕರು ವಂಚನೆ ಮಾಡುತ್ತಾರೆ. ಇದರ ಬಗ್ಗೆ ಜನರು ಜಾಗೃತರಾಗಿರಬೇಕು. ಇಂದು ಹಮ್ಮಿಕೊಂಡಿರುವ ಮ್ಯಾರಥಾನ್ ಓಟದ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಮಾತನಾಡಿ, ಇತ್ತೀಚೆಗೆ ಸಮಾಜದಲ್ಲಿ ಚರಾಸ್ತಿಗೆ ಸಂಬಂಧಿಸಿದಂತೆ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆಧುನಿಕ ತಂತ್ರಜ್ಞಾನ ಸಾಕಷ್ಟು ಮುಂದುವರೆಯುವುದರ ಜೊತೆಗೆ ಸಾಕಷ್ಟು ಅನಾಹುತಗಳಿಗೆ ಕಾರಣವಾಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಧುನಿಕ ತಂತ್ರಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ಪರಿಣಾಮ ಅಪರಾಧಗಳು ನಡೆಯುತ್ತಿವೆ. ಅನಗತ್ಯ ಲಿಂಕ್ ಒತ್ತಿ ಎಪಿಕೆ ಅಪ್ಲಿಕೇಷನ್ ಫೈಲ್‍ಗಳನ್ನು ಕ್ಲಿಕ್ ಮಾಡುವುದರಿಂದ ಸೈಬರ್ ವಂಚನೆಗಳು ನಡೆಯುತ್ತವೆ, ಈ ಬಗ್ಗೆ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.

ಮ್ಯಾರಥಾನ್ ಓಟವು ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಗಂಜ್ ವೃತ್ತ, ಚಂದ್ರಮೌಳೇಶ್ವರ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಸ್ಟೇಷನ್ ರಸ್ತೆ ಮೂಲಕ ರಂಗಮಂದಿರದವರೆಗೆ ನಡೆಯಿತು. ರಂಗಮಂದಿರದಲ್ಲಿ ಮ್ಯಾರಥಾನ್‍ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸೈಬರ್ ವಂಚನೆ ಕುರಿತಾದ ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪುರುರಾಜ್ ಸಿಂಗ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ಜಿ.ಹರೀಶ, ಡಿವೈಎಸ್‍ಪಿಗಳಾದ ಶಾಂತವೀರ, ದತ್ತಾತ್ರೆಯ ಕರ್ನಾಡ್, ಪ್ರಮಾನಂದ ಘೋಡ್ಕೆ, ಸೈಬರ್ ಡಿವೈಎಸ್‍ಪಿ ವೆಂಕಟೇಶ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X