Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಜಿಪಂ | ಸ್ವಚ್ಛ ಭಾರತ ಮಿಷನ್...

ರಾಯಚೂರು ಜಿಪಂ | ಸ್ವಚ್ಛ ಭಾರತ ಮಿಷನ್ ನಡಿ ನಿರ್ಮಿಸಿದ ಶೌಚಾಲಯ, ಬಳಕೆಯ ವರದಿ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Sept 2026 10:18 AM IST
share
ರಾಯಚೂರು ಜಿಪಂ | ಸ್ವಚ್ಛ ಭಾರತ ಮಿಷನ್ ನಡಿ ನಿರ್ಮಿಸಿದ ಶೌಚಾಲಯ, ಬಳಕೆಯ ವರದಿ ನೀಡಲು ಸೂಚನೆ

ರಾಯಚೂರು: ಸ್ವಚ್ಛ ಭಾರತ ಮಿಷನ್ ನಲ್ಲಿ ಭ್ರಷ್ಟಾಚಾರ, ಅವ್ಯವಹಾರ ನಡೆದ ದೂರಿಗೆ ಸಂಬಂಧಿಸಿದಂತೆ ಶುಕ್ರವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಪಿಡಿಒಗಳ ಸಭೆ ಕರೆದು ಶೌಚಾಲಯಗಳ ಸ್ಥಿತಿಗತಿ, ಅವುಗಳ ಬಳಕೆ ಹಾಗೂ ನಿರುಪಯುಕ್ತವಾಗಿರುವ ಶೌಚಾಲಯಗಳ ಕುರಿತು ಸಮರ್ಪಕವಾಗಿ ಸಮೀಕ್ಷೆ ನಡೆಸಿ ನಿಖರ ಮಾಹಿತಿಯೊಂದಿಗೆ ಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸ್ವಚ್ಛ ಭಾರತ ಮಿಷನ್ ನಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಕುರಿತು 'ವಾರ್ತಾಭಾರತಿ' ಪತ್ರಿಕೆಯಲ್ಲಿ ಸೆ.16ರಂದು ‘ಸ್ವಚ್ಛ ಭಾರತ ಮಿಷನ್ ನಲ್ಲಿ ಭಾರಿ ಅವ್ಯವಹಾರ' ಅಶ್ವಿನಿ ಕೊಲೆ ಪ್ರಕರಣದಿಂದ ಬಯಲಾದ ವಾಸ್ತವ; ವರದಿ ನೀಡಲು ಜಿಪಂಗೆ ಸೂಚನೆ' ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ವರದಿ ಬಳಿಕ ಜಿಪಂ ಸಿಇಒ ಸಭಾಂಗಣದಲ್ಲಿ ಜಿಲ್ಲೆಯ ಪಿಡಿಒಗಳ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಮಾಡಿ ಸ್ಥಳೀಯ ಮಟ್ಟದ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸ್ವಚ್ಛ ಭಾರತ ಯೋಜನೆಯಡಿ ನಿರ್ಮಿಸಿರುವ ಶೌಚಾಲಯಗಳನ್ನು ಕುಟುಂಬಗಳು ಸಮರ್ಪಕವಾಗಿ ಬಳಕೆ ಮಾಡುತ್ತಿವೆಯೇ, ನಿರುಪಯುಕ್ತವಾಗಿವೆಯೇ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಬೇಕು. ಇತ್ತೀಚೆಗೆ ಮಾನವಿ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಎಲ್ಲೆಡೆ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಶೌಚಾಲಯಗಳ ವಾಸ್ತವ ಸ್ಥಿತಿಗತಿ ಹಾಗೂ ಅವುಗಳ ಬಳಕೆಯ ಕುರಿತು ನಿಖರ ಮಾಹಿತಿ ಪಡೆಯುವುದು ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಷ್ಟು ಗ್ರಾಮಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ, ಎಷ್ಟು ಕುಟುಂಬಗಳು ಅವುಗಳನ್ನು ಬಳಕೆ ಮಾಡುತ್ತಿವೆ, ನಿರ್ಮಾಣಗೊಂಡಿದ್ದರೂ ಬಳಕೆ ಮಾಡದಿರುವ ಶೌಚಾಲಯಗಳ ಸಂಖ್ಯೆ ಎಷ್ಟು, ಬಳಕೆ ಮಾಡದಿರುವುದಕ್ಕೆ ಕಾರಣವೇನು, ಶೌಚಾಲಯದ ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆಯೇ ಹಾಗೂ ಇನ್ನೂ ಶೌಚಾಲಯ ನಿರ್ಮಾಣವಾಗದ ಕುಟುಂಬಗಳಿವೆಯೇ ಎಂಬ ಕುರಿತು ಸಮೀಕ್ಷೆಯ ಮೂಲಕ ಮಾಹಿತಿ ಪಡೆಯಬೇಕು ಎಂದರು.

ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಶೌಚಾಲಯಗಳ ವಾಸ್ತವ ಸ್ಥಿತಿ, ಶೌಚಾಲಯ ಬಳಕೆಯ ಪ್ರಮಾಣ ಹಾಗೂ ಶೌಚಾಲಯ ಬಳಕೆಗೆ ಸಂಬಂಧಿಸಿದ ಸಾಮಾಜಿಕ ಸಮಸ್ಯೆಗಳ ಕುರಿತು ನಿಖರ ಮಾಹಿತಿ ಸಂಗ್ರಹಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಮೀಕ್ಷೆಯ ಸಂದರ್ಭದಲ್ಲಿ ನಿಗದಿತ ಶೌಚಾಲಯ ಬಳಕೆ ಪರಿಶೀಲನಾ ಪಟ್ಟಿಯನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಶೌಚಾಲಯ ನಿರ್ಮಾಣಗೊಂಡಿದೆಯೇ, ಪ್ರಸಕ್ತ ಬಳಕೆಯಲ್ಲಿದೆಯೇ, ನಿರ್ಮಾಣಗೊಂಡಿದ್ದರೂ ಬಳಕೆ ಮಾಡದಿದ್ದರೆ ಅದಕ್ಕೆ ನಿಜವಾದ ಕಾರಣವೇನು ಎಂಬುದನ್ನು ಸ್ಪಷ್ಟವಾಗಿ ದಾಖಲಿಸಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯತ್ ಗಳಲ್ಲಿ ಶೌಚಾಲಯ ತ್ಯಾಜ್ಯವನ್ನು ಸಕ್ಕಿಂಗ್ ಯಂತ್ರದ ಮೂಲಕ ಸಂಗ್ರಹಿಸಿ ಡಂಪಿಂಗ್ ಪ್ಲಾಂಟ್ ನಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಸಕ್ಕಿಂಗ್ ಯಂತ್ರಗಳು ತಾಲೂಕು ಮಟ್ಟದಲ್ಲಿದ್ದು, ಅಗತ್ಯವಿದ್ದಲ್ಲಿ ನಿಗದಿತ ಶುಲ್ಕ ಪಾವತಿಸಿ ಸೇವೆ ಪಡೆಯಬಹುದು ಎಂದು ಹೇಳಿದರು.

ಕೆಲವು ಕಡೆಗಳಲ್ಲಿ ಸಕ್ಕಿಂಗ್ ಯಂತ್ರಗಳ ಕೊರತೆ ಇದ್ದು, ಅಂತಹ ಸಂದರ್ಭಗಳಲ್ಲಿ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಶೌಚಾಲಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬಹುದು ಎಂದರು.

ಪ್ರತಿಯೊಂದು ಗ್ರಾಮ ಪಂಚಾಯತ್ ಗೂ ಕಸ ವಿಲೇವಾರಿ ವಾಹನ ನೀಡಲಾಗಿದೆ. ವಾಹನಗಳ ಮೂಲಕ ಪ್ರತಿದಿನ ಕಸ ಸಂಗ್ರಹಿಸಲಾಗುತ್ತಿದೆಯೇ, ಸಂಗ್ರಹಿಸಿದ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಮರ್ಪಕವಾಗಿ ಸಂಗ್ರಹಿಸಲಾಗುತ್ತಿದೆಯೇ ಹಾಗೂ ಕಸವನ್ನು ಹಸಿ ಮತ್ತು ಒಣ ತ್ಯಾಜ್ಯವಾಗಿ ವಿಂಗಡಿಸಲಾಗುತ್ತಿದೆಯೇ ಎಂಬುದರ ಕುರಿತು ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶೌಚಾಲಯಗಳ ಸ್ಥಿತಿಗತಿ ಕುರಿತು ಸಮರ್ಪಕವಾಗಿ ಸಮೀಕ್ಷೆ ನಡೆಸಿ, ಕುಟುಂಬಗಳ ವಿಂಗಡಣೆ, ಶೌಚಾಲಯ ನಿರ್ಮಾಣಗೊಂಡಿರುವುದು, ನಿರ್ಮಾಣದ ಅಗತ್ಯವಿರುವ ಕುಟುಂಬಗಳ ಸಂಖ್ಯೆ ಸೇರಿದಂತೆ ಎಲ್ಲ ಮಾಹಿತಿಯನ್ನು ನಿಖರವಾಗಿ ನಮೂದಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶರಣಬಸವ, ಯೋಜನಾಧಿಕಾರಿ ಟಿ.ರೋಟಿ, ಜಿಪಂ ಉಪ ಕಾರ್ಯದರ್ಶಿ ಹಾಲ್ ಸಿದ್ದಪ್ಪ ಪೂಜಾರಿ, ಮುಖ್ಯ ಲೆಕ್ಕಾಧಿಕಾರಿ ವಿಜಯ ಶಂಕರ್ ಸೇರಿದಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X