ರಾಯಚೂರಿನಲ್ಲಿ ಗುಡುಗು-ಸಿಡಿಲು ಸಹಿತ ಮಳೆ

ರಾಯಚೂರು : ರಾಯಚೂರು ತಾಲೂಕಿನ ಸಾತ್ ಮೈಲ್ ಕ್ರಾಸ್, ಕಸ್ಬೆ ಕ್ಯಾಂಪ್, ಕಲ್ಮಲಾ, ಕಲ್ಲೂರು ಸೇರಿದಂತೆ ಹಲವೆಡೆ ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ.
ಈ ಬಾರಿ ಮುಂಗಾರು ಪೂರ್ವದಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಸುರಿಯದ ಹಿನ್ನೆಲೆ ರೈತರು ಆತಂಕದಲ್ಲಿದ್ದರು. ಆದರೆ ಇದೀಗ ತಡವಾಗಿಯಾದರೂ ಸುರಿದ ಮುಂಗಾರು ಪೂರ್ವ ಮಳೆ ರೈತರಲ್ಲಿ ಸಂತಸ ಮೂಡಿಸಿದೆ.
ತಾಲೂಕಿನ ವಿವಿಧ ಭಾಗಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯ ಅಬ್ಬರ ಕಂಡುಬಂದಿದೆ. ಮುಂಗಾರು ಹಂಗಾಮಿಗೆ ಈ ಮಳೆ ಹೊಸ ಚೈತನ್ಯ ತಂದಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ಕೆಲ ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ಮಳೆಯೊಂದಿಗೆ ತಂಪಾದ ವಾತಾವರಣ ನೆಮ್ಮದಿ ತಂದಿದೆ.
ಇದೀಗ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದರೂ, ಕೃಷಿ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲು ಇನ್ನಷ್ಟು ದೊಡ್ಡ ಪ್ರಮಾಣದ ಮಳೆ ಅಗತ್ಯವಿದೆ ಎಂದು ರೈತರು ತಿಳಿಸಿದ್ದಾರೆ.
Next Story




