ರಾಯಚೂರು | ಸರಕಾರಿ ಬಸ್ - ಲಾರಿ ಮುಖಾಮುಖಿ ಢಿಕ್ಕಿ; 16 ಜನರಿಗೆ ಗಾಯ

ರಾಯಚೂರು: ಸಿಂಧನೂರು ನಗರದ ಪಿಡಬ್ಲ್ಯೂ ಕ್ಯಾಂಪ್ ನ ಆಕ್ಸ್‌ಫರ್ಡ್ ಕಾಲೇಜು ಬಳಿ ಸಾರಿಗೆ ಬಸ್ ಮತ್ತು ಅಕ್ಕಿ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ 16 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಮತ್ತು ಲಾರಿ ಎರಡೂ ವೇಗವಾಗಿ ಚಲಿಸುತ್ತಿದ್ದವು. ಈ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಲ್ಲಿದ್ದ 16 ಪ್ರಯಾಣಿಕರಿಗೆ ಗಾಯಗಳಾಗಿದೆ.
8 ಜನ ಗಾಯಾಳುಗಳನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರನ್ನು ಶಾಂತಿ ಆಸ್ಪತ್ರೆ ಹಾಗೂ ರೇಣುಕಾ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ ತಿಳಿಸಿದ್ದಾರೆ. ಅಪಘಾತದಿಂದ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
Next Story





