Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕರ್ತವ್ಯ ಲೋಪವೆಸಗುವ ಅಧಿಕಾರಿಗಳ...

ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ಅಮಾನತಿಗೆ ಶಿಫಾರಸು : ಶಾಸಕಿ ಕರೆಮ್ಮ ಜಿ.ನಾಯಕ

ವಾರ್ತಾಭಾರತಿವಾರ್ತಾಭಾರತಿ19 Jan 2026 8:04 PM IST
share
ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ಅಮಾನತಿಗೆ ಶಿಫಾರಸು : ಶಾಸಕಿ ಕರೆಮ್ಮ ಜಿ.ನಾಯಕ
"ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ"

ದೇವದುರ್ಗ: ಬೇಸಿಗೆ ಆರಂಭವಾಗುತ್ತಿದ್ದು, ದೇವದುರ್ಗ ಹಾಗೂ ಅರಕೇರಾ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗ್ರಾಪಂ ಅಧಿಕಾರಿಗಳು ಎಚ್ಚರವಹಿಸಬೇಕು. ಆತ್ಮವಿಶ್ವಾಸ ಮತ್ತು ಜನಸೇವೆಯ ಮನೋಭಾವದಿಂದ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಿ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ದೇವದುರ್ಗ ಮತ್ತು ಅರಕೇರಾ ತಾಲೂಕು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಒಂದು ಹಳ್ಳಿಯ ಸಮಸ್ಯೆಯನ್ನು ಎರಡೂ ಮೂರು ಬಾರಿ ಹೇಳಿದರೂ ಕೆಲಸವಾಗುತ್ತಿಲ್ಲ. ಕೊತ್ತದೊಡ್ಡಿ ಗ್ರಾಮದಲ್ಲಿ ಸ್ವಂತ ಹಣದಲ್ಲಿ ಕೊರೆಸಿದ ಮೂರು ಬೋರ್‌ವೆಲ್‌ಗಳಿಗೆ ಮೋಟಾರ್ ಅಳವಡಿಸಲು ವರ್ಷಗಳ ಕಾಲ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಪಿಡಿಒ ಲಿಂಗಣ್ಣ ಅವರನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಸರ್ಕಾರಕ್ಕೆ ಹಾಗೂ ಶಾಸಕರಿಗೆ ಕೆಟ್ಟ ಹೆಸರು ಬರುತ್ತಿದೆ. ಇದೇ ವರ್ತನೆ ಮುಂದುವರಿದರೆ ಅಮಾನತಿಗೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿವಿಧ ವಸತಿ ಯೋಜನೆಯಡಿ ಮನೆಗಳು ಮಂಜೂರಾಗಿದ್ದರೂ ಲಾಗಿನ್ ಬ್ಲಾಕ್ ಮಾಡಿ ಫಲಾನುಭವಿಗಳನ್ನು ಅಲೆದಾಡಿಸುತ್ತಿರುವ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಹಣ ಕೊಟ್ಟವರಿಗೆ ಮಾತ್ರ ಜಿಪಿಎಸ್ ಮಾಡುವ ಪದ್ಧತಿಯನ್ನು ಮೊದಲು ಕೈಬಿಡಿ. ಅರ್ಹ ಫಲಾನುಭವಿಗಳಿಗೆ ತೊಂದರೆ ನೀಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ತಾಲೂಕಿನ ಸುಮಾರು 50 ಶುದ್ಧ ಕುಡಿಯುವ ನೀರಿನ ಘಟಕಗಳು ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿರುವುದನ್ನು ಗಮನಿಸಿದ ಶಾಸಕರು, ಕೂಡಲೇ ಅವುಗಳನ್ನು ದುರಸ್ತಿ ಮಾಡುವಂತೆ ಎಇಇ ಹೀರಲಾಲ್ ಅವರಿಗೆ ಸೂಚಿಸಿದರು. ಅಲ್ಲದೆ, ರಾಮದುರ್ಗ, ಮೂಷ್ಟೂರು, ಅಮರಾಪುರ ಕೆರೆಗಳ ನಿರ್ವಹಣೆಗೆ ಅನುದಾನ ಬಳಕೆಯಾಗುತ್ತಿದ್ದರೂ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಿದರು.

ಈ ಕುರಿತು ಅಧಿಕಾರಿಗಳ ತಂಡ ರಚಿಸಿ ಪ್ರತ್ಯೇಕ ಸಭೆ ಕರೆಯಲು ತಾಪಂ ಇಒ ಬಸವರಾಜ ಹಟ್ಟಿ ಅವರಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತಾಪಂ ಇಒ ಬಸವರಾಜ ಹಟ್ಟಿ, ಅರಕೇರಾ ತಾಪಂ ಇಒ ಅಣ್ಣರಾವ್‌, ಎಡಿ ಮಹೇಶ್ವರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Tags

Karemma J.Nayak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X