Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನೈಸರ್ಗಿಕ, ಸಾವಯವ ಕೃಷಿಯ ಮೌಲ್ಯಮಾಪನ...

ನೈಸರ್ಗಿಕ, ಸಾವಯವ ಕೃಷಿಯ ಮೌಲ್ಯಮಾಪನ ಮಾಡಲು ಸಂಶೋಧಕರು ಮುಂದಾಗಬೇಕಿದೆ: ಡಾ.ಎಂ. ಹನುಮಂತಪ್ಪ

ವಾರ್ತಾಭಾರತಿವಾರ್ತಾಭಾರತಿ18 Feb 2025 11:00 AM IST
share
ನೈಸರ್ಗಿಕ, ಸಾವಯವ ಕೃಷಿಯ ಮೌಲ್ಯಮಾಪನ ಮಾಡಲು ಸಂಶೋಧಕರು ಮುಂದಾಗಬೇಕಿದೆ: ಡಾ.ಎಂ. ಹನುಮಂತಪ್ಪ

ರಾಯಚೂರು: ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಎಲ್ಲಿ ಅಳವಡಿಸಬೇಕು ಎಂಬುದನ್ನು ಸಂಶೋಧಕರು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕು. ಅಲ್ಲದೆ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಸಾರ್ವಜನಿಕರಿಗೆ ತಿಳಿಹೇಳಬೇಕೆಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ಹೇಳಿದರು.

ಫೆ.17 ಸೋಮವಾರ ನಗರದ ಕೃಷಿ ವಿವಿಯ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ನವದೆಹಲಿ ಪ್ರಾಯೋಜಿತ ಚಳಿಗಾಲದ ಸುಸ್ಥಿರ ಮಣ್ಣಿನ ಆರೋಗ್ಯ ಮತ್ತು ಜೀವನೋಪಾಯದ ಭದ್ರತೆಗಾಗಿ ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯ ತಾಂತ್ರಿಕ ಸಾಧನೆ, ಸಂಶೋಧನಾ ಆದ್ಯತೆ ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಫೆ.17ರಿಂದ ಮಾರ್ಚ್ 09ರವರೆಗೆ ನಡೆಯುವ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತೀವ್ರವಾದ ಏಕಬೆಳೆ ಕೃಷಿಯಿಂದಾಗಿ ಮಣ್ಣಿನ ಫಲವತ್ತತೆ ಕುಸಿತ ಮತ್ತು ಜೀವ ವೈವಿಧ್ಯ ನಷ್ಟದಿಂದ ಉಂಟಾಗುವ ಸವಾಲುಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಭಾರತಾದ್ಯಂತ ಸಾವಯವ ಇಂಗಾಲದ ಮಟ್ಟವು ಸ್ಥಿರವಾಗಿ ಕಡಿಮೆಯಾಗುತ್ತಿದೆ. ಮಣ್ಣಿನ ಫಲವತ್ತತೆಯನ್ನು ಪುನಃ ಸ್ಥಾಪಿಸಲು ಬೆಳೆ ಪರಿವರ್ತನೆ ಮತ್ತು ಸಾವಯವ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳಬೇಕು. ಗುಜರಾತ್ ಮಾದರಿ ಮತ್ತು ಇ-ಶಾಪ್ ತಂತ್ರಜ್ಞಾನದಂತಹ ಸುಧಾರಿತ ಮಣ್ಣಿನ ಪರೀಕ್ಷಾ ತಂತ್ರಜ್ಞಾನಗಳ ಪಾತ್ರದ ಬಗ್ಗೆ ಅವರು ಒತ್ತಿ ಹೇಳಿದರು.

ವಿಶ್ವವಿದ್ಯಾನಿಲಯದ ಐಸಿಎಆರ್ ಮೂರು ಚಳಿಗಾಲದ ಕೋರ್ಸ್ ಗಳಿಗೆ ಮಂಜೂರಾತಿ ನೀಡಿದೆ. ಅವುಗಳಲ್ಲಿ ಒಂದು ಈಗಾಗಲೇ ಕೀಟನಾಶಕ ಶೇಷ ನಿರ್ವಹಣೆ ಮತ್ತು ಗುಣಮಟ್ಟ ವಿಶ್ಲೇಷಣೆಯ ಕುರಿತು ಪೂರ್ಣಗೊಂಡಿದೆ. ಉಳಿದ ಎರಡು ಕೊಯ್ಲು ನಂತರದ ತಂತ್ರಜ್ಞಾನ ಮತ್ತು ಆಹಾರ ಸಂಸ್ಕರಣೆಯ ಮೇಲೆ ಕೇಂದ್ರೀಕೃತವಾಗಿವೆ. ಇದು ಕೃಷಿ ಸಂಶೋಧನೆಯನ್ನು ಮುನ್ನಡೆಸುವ ಸಂಸ್ಥೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಸುಸ್ಥಿರ ಕೃಷಿಯ ಕುರಿತು ಸಮಗ್ರ ಚರ್ಚೆಯನ್ನು ಖಚಿತಪಡಿಸಿಕೊಳ್ಳಲು ತಜ್ಞರ ಉಪನ್ಯಾಸಗಳನ್ನು ಬಹಳ ಜಾಗರೂಕತೆಯಿಂದ ಆಯೋಜನೆ ಮಾಡಬೇೆಕು ಎಂದರು.

ತೀವ್ರ ಕೃಷಿ ಪದ್ಧತಿಯ ಕಾರಣದಿಂದಾಗಿ ಮಣ್ಣಿನ ಸಾರ್ವತ್ರಿಕ ಫಲವತ್ತತೆ ಮತ್ತು ಜೈವಿಕ ಕಾರ್ಬನ್ ಅಂಶದ ಪ್ರಮಾಣ ಕಡಿಮೆಯಾಗುತ್ತಿದೆ. ಒಂದೇ ಬೆಳೆ ಸತತ ಬೆಳೆಸುವ ಪದ್ಧತಿ ಹೆಚ್ಚುತ್ತಿದೆ. ನಾವು ಮಣ್ಣಿನ ಭೌತಿಕ, ರಸಾಯನಿಕ ಮತ್ತು ಜೈವಿಕ ಗುಣಗಳನ್ನು ಸಮತೋಲನದಲ್ಲಿರಿಸುವ ಮಾರ್ಗಗಳನ್ನು ಅನ್ವೇಷಿಸಬೇಕಾಗಿದೆ. ಅಲ್ಲದೆ ಮಣ್ಣಿನ ಪೋಷಕಾಂಶ ಕೊರತೆಗಳನ್ನು ತಕ್ಷಣ ನಿಗಿಸಬೇಕು. ಶ್ರೀಲಂಕಾದ ನೈಸರ್ಗಿಕ ಕೃಷಿ ಅನುಭವವನ್ನು ಆಧರಿಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

21 ದಿನಗಳ ಕಾಲ ಕಾರ್ಯಾಗಾರ:

ಫೆ.17ರಿಂದ ಮಾರ್ಚ್ 09ರವರೆಗೆ ಸುಮಾರು 21ದಿನಗಳ ಕಾಲ ನಡೆಯುವ ಕಾರ್ಯಾಗಾರದಲ್ಲಿ ಸಾವಯವ ಕೃಷಿ, ಮಣ್ಣಿನ ಆರೋಗ್ಯ, ಕೃಷಿಯಲ್ಲಿ ತಂತ್ರಜ್ಞಾನ ಬಳಕೆ, ಆರೋಗ್ಯ ವೃದ್ಧಿ ಸೇರಿದಂತೆ ಹತ್ತಾರು ವಿಚಾರಗಳು ಚರ್ಚೆ ನಡೆಯಲಿವೆ. ಈ ಕಾರ್ಯಾಗಾರದಲ್ಲಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ ಕೃಷಿ ವಿಜ್ಞಾನಿಗಳು ತಮ್ಮ ವಿಚಾರ ಮಂಡಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X