ರಸ್ತೆ ಅಪಘಾತ: ಶಾಸಕನ ಕಾರು ಚಾಲಕ ಮೃತ್ಯು

ರಾಯಚೂರು, ನ.11: ರಸ್ತೆ ಅಪಘಾತದಲ್ಲಿ ಎರಡು ದ್ವಿಚಕ್ರ ವಾಹನಗಳು ಢಿಕ್ಕಿಯಾದ ಪರಿಣಾಮ ನಗರ ಶಾಸಕ ಡಾ.ಶಿವರಾಜ ಪಾಟೀಲರ ಕಾರು ಚಾಲಕ ಮೃತಪಟ್ಟಿರುವ ಘಟನೆ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿರುವುದು ವರದಿಯಾಗಿದೆ.
ನಗರ ಶಾಸಕ ಡಾ.ಶಿವರಾಜಪಾಟೀಲ್‌ರ ಕಾರು ಚಾಲಕ ಮುಹಮದ್ ರಫಿ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ರಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





