Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರ...

ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರ ಬಲವರ್ಧನೆಗೆ 873 ಕೋಟಿ ರೂ. ವೆಚ್ಚ: ಸಚಿವ ಅಜಯ್ ಧರ್ಮಸಿಂಗ್

ರಾಯಚೂರಿನಲ್ಲಿ 20 ಕೋಟಿ ರೂ. ವೆಚ್ಚದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ29 Nov 2026 7:07 PM IST
share
ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರ ಬಲವರ್ಧನೆಗೆ 873 ಕೋಟಿ ರೂ. ವೆಚ್ಚ: ಸಚಿವ ಅಜಯ್ ಧರ್ಮಸಿಂಗ್

ರಾಯಚೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಳೆದ ಮೂರೂವರೆ ವರ್ಷಗಳಲ್ಲಿ ಸುಮಾರು 873 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಕೆಆರ್‌ಡಿಬಿ ವತಿಯಿಂದ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಾಯಚೂರು ನಗರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯ ಸುಧಾರಣೆಗೆ ಹೆಚ್ಚಿನ ಕಾಳಜಿ ವಹಿಸುತ್ತಿರುವ ಆರೋಗ್ಯ ಸಚಿವರು ಹಲವಾರು ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು, ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಯಚೂರು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಹಾಗೂ ಕೊಡುಗೆಗಳನ್ನು ನೀಡುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿರುವುದಾಗಿ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗಾಗಿ 873 ಕೋಟಿ ರೂ. ಅನುದಾನ ಬಳಸಿಕೊಳ್ಳಲಾಗುತ್ತಿದೆ. ಇದರಡಿ ನೂತನ ಆರೋಗ್ಯ ಕೇಂದ್ರಗಳ ಸ್ಥಾಪನೆ, ಹಳೆಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಈ ಯೋಜನೆಗಳನ್ನು ಕಟ್ಟುನಿಟ್ಟಾಗಿ ಹಾಗೂ ಕಾಲಮಿತಿಯೊಳಗೆ ಜಾರಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಸಚಿವರು ಸೂಚಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಆರೋಗ್ಯ ಕೇಂದ್ರವು ಜಿಲ್ಲೆಯ ಜನರಿಗೆ ಅಗತ್ಯ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ. ಈ ಯೋಜನೆ ತಮಗೆ ಅತ್ಯಂತ ಸಂತಸ ತಂದಿದೆ. ಆರೋಗ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಒಗ್ಗೂಡಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಭೋಸರಾಜು ಹಾಗೂ ವಸಂತ ಕುಮಾರ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರುದ್ರಪ್ಪ ಅಂಗಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪವನ್ ಕುಮಾರ್ ಕಿಶೋರ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಎಂ.ಡಿ. ಶಾಕೀರ್, ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

healthcareKalyana KarnatakaAjay Dharam Singh
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X