Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆರೆಸ್ಸೆಸ್‌ ದ್ವೇಷ ಬಿತ್ತುವ ಮೂಲಕ...

ಆರೆಸ್ಸೆಸ್‌ ದ್ವೇಷ ಬಿತ್ತುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಹಾಳುಮಾಡುತ್ತಿದೆ : ಪ್ರೊ.ಶಂಸುಲ್ ಇಸ್ಲಾಂ

ಸಿಂಧನೂರಿನಲ್ಲಿ 11ನೇ ಮೇ ಸಾಹಿತ್ಯ ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ17 May 2025 7:55 PM IST
share
Photo of Program

ಸಿಂಧನೂರು(ರಾಯಚೂರು ): ದೇಶದಲ್ಲಿ ಇತಿಹಾಸವನ್ನು ತಿರುಚಿ ಮುಸ್ಲಿಮರ ಬಗ್ಗೆ ಕೋಮು‌‌ ವಿಷ‌ಬೀಜ ಬಿತ್ತಿ, ಸೌಹಾರ್ದತೆ ಹಾಳು ಮಾಡಲಾಗುತ್ತಿದೆ. ಫ್ಯಾಶಿಸ್ಟ್ ಶಕ್ತಿಗಳು ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿ, ಹಿಂದೂ ರಾಷ್ಟ್ರವನ್ನಾಗಿಸುವ ಹುನ್ನಾರ ನಡೆಸಿರುವುದು ಅಪಾಯಕಾರಿಯಾಗಿದೆ‌ ಎಂದು ನವದೆಹಲಿ ವಿಶ್ವವಿದ್ಯಾಲಯದ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಶಂಸುಲ್ ಇಸ್ಲಾಂ ಹೇಳಿದರು.

ಜಿಲ್ಲೆಯ ಸಿಂಧನೂರು ನಗರದ ಸತ್ಯಗಾರ್ಡನ್‌ನಲ್ಲಿ ʼಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು -ಇಂದುʼ ಧ್ಯೇಯವಾಕ್ಯದ ಅಡಿಯಲ್ಲಿ ʼಮೇ ಸಾಹಿತ್ಯ ಬಳಗ ಸಿಂಧನೂರುʼ ನೇತೃತ್ವದಲ್ಲಿ ಆಯೋಜಿಸಿದ್ದ 11ನೇ ಮೇ ಸಾಹಿತ್ಯ ಮೇಳದಲ್ಲಿ ಅವರು ಮಾತನಾಡಿದರು.

ಆರೆಸ್ಸೆಸ್‌ ಮತ್ತು ಸಂಘಪರಿವಾರ ಸಂಘಟನೆಗಳು ದ್ವೇಷ ಬಿತ್ತುವ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡುತ್ತಿವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ಮನುವಾದಿ ಸಂಸ್ಕೃತಿಯನ್ನು ಹೇರಲು ಹೊರಟಿರುವ ಬಲಪಂಥೀಯ ಸಂಘಟನೆಗಳು ಅಸಮಾನತೆಗೆ ಕಾರಣವಾಗಿದೆ ಎಂದರು.

ಭಾರತವನ್ನು ಹನ್ನೊಂದು ನೂರು ವರ್ಷಗಳ ಕಾಲ ಮುಸ್ಲಿಂ ರಾಜರು ಆಳಿದರೂ, ಕೂಡ ದೇಶ ಇಸ್ಲಾಂ ದೇಶವಾಗಿಲ್ಲ. ಯಾವ ಯುದ್ಧಗಳೂ ಹಿಂದೂ-ಮುಸ್ಲಿಂ ವಿಷಯದ ಮೇಲೆ ನಡೆದಿಲ್ಲ, ಯುದ್ಧ ನಡೆಯಲು ಬೇರೆ-ಬೇರೆ ಕಾರಣಗಳಿವೆ. ಹಲವಾರು ಹಿಂದೂ ರಾಜರಿಗೆ ಮುಸ್ಲಿಂ ಸಲಹೆಗಾರರಿದ್ದರು, ಮುಸ್ಲಿಂ ರಾಜರೊಂದಿಗೆ ಹಿಂದೂ ಸಲಹೆಗಾರರು, ಆಡಳಿತಗಾರರು ಇದ್ದರು. ಆದರೆ ಇದನ್ನು ಮುಚ್ಚಿಟ್ಟು ಇತಿಹಾಸವನ್ನು ತಿರುಚಿ ಪ್ರಚಾರಪಡಿಸಲಾಗುತ್ತಿದೆ.‌ ಇದರ ಬಗ್ಗೆ ದೇಶದ ನಾಗರಿಕರು ಜಾಗೃತರಾಗಬೇಕು ಎಂದು‌ ಕಿವಿಮಾತು ಹೇಳಿದರು.

ಮಹಾರಾಷ್ಟ್ರದ ಔರಂಗಾಬಾದ್‌ನ ಹೋರಾಟಗಾರ್ತಿ ಹಾಗೂ ಅಂಬೇಡ್ಕರ್ ಅವರ ನಿಕಟವರ್ತಿಯಾಗಿದ್ದ ಬಲವಂತರಾವ್ ವರಾಳೆ ಅವರ ಸೊಸೆ ಮಾಲತಿ ವರಾಳೆ ಮಾತನಾಡಿ, ಶಿಕ್ಷಣದ ಖಾಸಗೀಕರಣದಿಂದ ಗುಣಮಟ್ಟದ ಶಿಕ್ಷಣವು ತಳ ಸಮುದಾಯದ ಮಕ್ಕಳಿಗೆ ಕೈಗೆಟುಕದಂತಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಕುಸಿತದಿಂದ ದಲಿತ-ದಮನಿತ ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಜಾತೀಯತೆ, ಲಿಂಗ ಅಸಮಾನತೆ, ಭ್ರೂಣಹತ್ಯೆ ನಡೆಯುತ್ತಿರುವುದು ವಿಷಾದಕರ. ಇದು ಕಡಿಮೆಯಾಗಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದ ನಂತರವೂ ಜಾತಿ ಮತ್ತು ಲಿಂಗಭೇದ ಶತಶತಮಾನಗಳಿಂದ ಮುಂದುವರಿದಿದೆ. ಒಂದು ಸಮಾಜವನ್ನು ಇನ್ನೊಂದು ಸಮಾಜ ತುಳಿಯುತ್ತ ಶೋಷಣೆ ಮಾಡುತ್ತ ಬಂದಿದೆ. ಇದು ನಿಲ್ಲಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಗಮ್ಮ ಮೆದಿಕಿನಾಳ, ಚಿನ್ನಮ್ಮ ಮುದ್ದಂಗುಡ್ಡಿ, ತಿಮ್ಮನಗೌಡ ಚಿಲ್ಕರಾಗಿ, ನರಸಿಂಹಪ್ಪ ಸಿಂಧನೂರು, ಹಿರೇನಗನೂರು ಭೀಮಣ್ಣ, ಜಮಾಅತೆ ಇಸ್ಲಾಂ ಹಿಂದ್‌ನ ಹುಸೇನ್‌ಸಾಬ್, ಫಾದರ್ ವಿನೋದ್ ಪೌಲ್.ಎಸ್.ಜೆ, ಪಿ.ರುದ್ರಪ್ಪ, ಮೋಕ್ಷಮ್ಮ, ಹೇಮಂತ್ ಎಂ.ಭೂತನಾಳ, ಅನಿಲ್ ಹೊಸಮನಿ ಇದ್ದರು.

ಮೇಳದ ಸಂಚಾಲಕರಾದ ಡಿ.ಎಚ್.ಕಂಬಳಿ ಸ್ವಾಗತಿಸಿದರು. ಸಂಗಮೇಶ ಮೆಣಸಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಎಚ್.ಎಸ್.ಅನುಪಮಾ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X