ಹೊಸ ಬ್ರಿಡ್ಜ್‌ಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಆದ್ಯತೆ : ಸತೀಶ್ ಜಾರಕಿಹೊಳಿ

ಸಿಂಧನೂರು : ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹೊಸ ಬ್ರಿಡ್ಜ್ ಗಳ ನಿರ್ಮಾಣಕ್ಕೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು. ಕಳೆದ ಬಾರಿ ನೀಡಿದಂತೆ ಈ ಬಾರಿ ಪಿಡಬ್ಲ್ಯೂಡಿ ಇಲಾಖೆಗೆ 2 ಸಾವಿರ ಕೋಟಿ ರೂ. ಅನುದಾನ ನೀಡಲು ಸಿಎಂಗೆ ಮನವಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ರವಿವಾರ ನಗರದ ಸರ್ಕ್ಯೂಟ್ ಹೌಸ್ ಬಳಿ ಇರುವ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಹಲವು ಕಾರ್ಯಕ್ರಮಗಳನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಹೊಸ ಬ್ರಿಡ್ಜ್ ಗಳನ್ನು ಮಾಡಲಾಗಿಲ್ಲ. ಈ ಬಾರಿ ಹೊಸ ಬ್ರಿಡ್ಜ್ ಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದ್ದು, ಉಳಿದಂತ ಕಾಮಗಾರಿಗಳನ್ನು ಮಳೆಗಾಲದ ನಂತರ ಕೈಗೆತ್ತಿಕೊಳ್ಳಲಾಗುವುದು ಎಂದರು.
ರಾಯಚೂರು ಸಿಂಧನೂರು ಹೈವೆ ಕಾಮಗಾರಿ ನಡೆದಿದೆ. ಶೀಘ್ರಗತಿಯಲ್ಲಿ ಕಾಮಗಾರಿ ನಡೆಸುವಂತೆ ಗುತ್ತೇದಾರರಿಗೆ ಸೂಚಿಸಲಾಗಿದೆ ಎಂದರು.
"ಸಿಎಂ ಬದಲಾವಣೆ ಆದಾಗ ನೋಡೋಣ. ಪ್ರಸ್ತುತ ರಾಜ್ಯದಲ್ಲಿ ನಡೆದಿರುವ ಸಿಎಂ ಬದಲಾವಣೆ ಚರ್ಚೆ ಅನಾವಶ್ಯಕ"
ಸತೀಶ್ ಜಾರಕಿಹೊಳಿ, ಸಚಿವ




