ಹಟ್ಟಿಯಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

ಲಿಂಗಸುಗೂರು: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ಶನಿವಾರ ಸಮಾಜ ಸುಧಾರಕಿ ಹಾಗೂ ಮಹಿಳಾ ಶಿಕ್ಷಣದ ಮುಂಚೂಣಿ ನಾಯಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಹಟ್ಟಿ ಪಟ್ಟಣದ ಪೈ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಶಾಂತಾ ಕೆ. ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿದ್ದು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಜಾತಿ–ಲಿಂಗ ಆಧಾರಿತ ಅಸಮಾನತೆಯ ವಿರುದ್ಧ ಧೈರ್ಯವಾಗಿ ಹೋರಾಡಿದ ಮಹಾನ್ ಚಿಂತಕಿ. ಅವರ ಆದರ್ಶಗಳು ಇಂದಿನ ಸಮಾಜಕ್ಕೆ ದಿಕ್ಕು ತೋರಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಜೀಯಾ ಅವರು, ಇಂದಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅಸಮಾನತೆ ಹಾಗೂ ಅನ್ಯಾಯಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಸಿಪಿಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಮಾತನಾಡಿದರು.
ಈ ಸಂದರ್ಭಗಳಲ್ಲಿ ಗಾಯತ್ರಿ, ಯಶೋಧ, ದೇವಮ್ಮ, ಅಂಬಮ್ಮ, ಲಕ್ಷ್ಮೀ, ಜಯಮ್ಮ, ವಾಯಿದಾ, ಹುಸೇನಬೀ, ಸಮಂಗಲಾ, ಗಿರಿಜಾ, ಭಾಗ್ಯ, ಬೇಗಂ, ನಿಂಗಪ್ಪ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾಹೀರಾ ಖಾನ್ ವಂದಿಸಿದರು.







