ರಾಯಚೂರು | ಶಾಲಾ ವಾಹನ- ಮಿನಿ ಲಾರಿ ನಡುವೆ ಅಪಘಾತ : 10ಕ್ಕೂ ಅಧಿಕ ಮಕ್ಕಳಿಗೆ ಗಾಯ

ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ವಾಹನ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 4ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಯನ್ನು ಮಾನ್ವಿ ಪಟ್ಟಣದ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ವೈದ್ಯಾಧಿಕಾರಿ ಡಾ. ಶರಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.
Next Story





