Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯಮಗಳೇ...

ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯಮಗಳೇ ದಾರಿದೀಪ: ಜಿ. ಯು. ಹುಡೇದ

ವಾರ್ತಾಭಾರತಿವಾರ್ತಾಭಾರತಿ23 Jan 2025 6:25 PM IST
share
ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯಮಗಳೇ ದಾರಿದೀಪ: ಜಿ. ಯು. ಹುಡೇದ

ರಾಯಚೂರು: ಜಿಲ್ಲೆಯ ಜನರು ಆರ್ಥಿಕ ಅಭಿವೃದ್ಧಿ ಹೊಂದಲು ಬೇಡಿಕೆ ಇರುವ ಸಣ್ಣ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಮುಂದೆ ಬರಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ. ಯು. ಹುಡೇದ ಅವರು ಹೇಳಿದರು.

ಜನವರಿ 22ರ ಬುಧವಾರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ (ಕೆ.ಕೆ.ಆರ್.ಡಿ.ಬಿ.), ಕಲಬುರಗಿ, ಕೌಶಲ್ಯಾಬೀವೃದ್ಧಿ, ಉದ್ಯಮಶಿಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಕೆ.ಕೆ.ಆರ್.ಡಿ.ಬಿ. ಉದ್ಯೋಗ ಆವಿಷ್ಕಾರ ಯೋಜನೆ ಅಡಿಯಲ್ಲಿ ಕಂಪ್ಯೂಟರ್ ಹಾರ್ಡವೇರ್ & ನೆಟ್‌ವರ್ಕಿಂಗ್ ಬಗ್ಗೆ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಬಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಕ್ರೀಯಾಶೀಲತೆಯಿಂದ ಯಾವುದೇ ಕಾರ್ಯ ಮಾಡಿದರೆ ಅದರಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ. ಕೌಶಲ್ಯಾಧಾರಿತ ಸೇವಾ ವಲಯಗಳ ಉದ್ಯಮಗಳಿಗೆ ಹೆಚ್ಚು ಬೇಡಿಕೆ ಇರುತ್ತದೆ ಅದರಲ್ಲಿಯೂ ವಿಶೇಷವಾಗಿ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್‌ವರ್ಕಿಂಗ್ ಉದ್ಯಮಗಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಇವು ಸೂಕ್ತವಾದ ತರಬೇತಿ ಕಾರ್ಯಕ್ರಮಗಳಾಗಿದ್ದು, ಪಡೆದ ತರಬೇತಿಯ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಉದ್ಯಮ ಪ್ರಾರಂಭಿಸಿ ಆರ್ಥಿಕವಾಗಿ ಮುಂದುವರೆಯಬೇಕು ಎಂದು ತಿಳಿಸಿ, ಸಿಡಾಕ್ ಮುಖಾಂತರ ಹಮ್ಮಿಕೊಂಡಿರುವ ಈ ತರಬೇತಿಗಳು ಉತ್ತಮ ಆಯ್ಕೆಯಾಗಿವೆ ಮತ್ತು ತರಬೇತಿಯು ವ್ಯವಸ್ಥಿತವಾಗಿ ನಡೆಸಲಾಗಿದೆ ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ರುಕ್ಮಿಣಿ ಬಾಯಿ ಅವರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ ವರ್ಕಿಂಗ್‌ನಿಂದ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಅನೇಕ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿ ಪರಿಶಿಷ್ಠ ವರ್ಗಗಳ ಇಲಾಖೆಯ ಯೋಜನೆಗಳ ಬಗ್ಗೆ ಸಮಾರಂಭದಲ್ಲಿ ವಿವರಿಸಿದರು.

ಈ ವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲರರಾದ ಯಂಕಣ್ಣ ಅವರು ಮಾತನಾಡಿ, ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಿ ಉದ್ಯಮಗಳನ್ನು ಸ್ವಯಂ ಉದ್ಯೋಗಿಗಳಾಗುವದರ ಜೊತೆಗೆ ಬೇರೆಯವರಿಗೂ ಕೆಲಸಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ರವಿ., ಶಿಭಿರಾರ್ಥಿಗಳಿಗೆ ಪೇರೇಪಿಸುತ್ತಾ ಸಿಕ್ಕಿರುವಂತ ಅವಕಾಶಗಳನ್ನು ಸರಿಯಾದ ಮಾರ್ಗದಲ್ಲಿ ಉಪಯೋಗಿಸಿಕೊಂಡು ಮುಂದಿನ ದಿನದಲ್ಲಿ ಉದಯೋನ್ಮುಖ ಉದಮಶೀಲಾರಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಆರ್.ವಿಕಾಂತನವರ್, ಬೇತುದಾರರಾದ ಶ್ರೀಸೈಯದ್, ಪೈಯಾಝ ಅಲಿ, ನಾಗರಾಜ ಕೆ, ಶಿವಕುಮಾರ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X