Raichur | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ಸೈಯದ್ ಜಾವೀದ್ ಉಲ್ ಹಕ್
ರಾಯಚೂರು: ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್ ಜಾವೀದ್ ಉಲ್ ಹಕ್ ಅವರು ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ 12.15ಕ್ಕೆ ನಿಧನರಾದರು.
ಸೈಯದ್ ಜಾವೀದ್ ಉಲ್ ಹಕ್ ಅವರು ಸಿದ್ದರಾಮಯ್ಯ ಅವರ ಹಿಂದಿನ ಆಡಳಿತಾವಧಿಯಲ್ಲಿ ಜಿಲ್ಲಾ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.
ಸುಮಾರು 35 ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ್ದ ಅವರು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಕಾನೂನು ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಮಂಗಳವಾರ ರಾತ್ರಿ 8 ಗಂಟೆಗೆ ನಗರದ ಜಾಮೀಯಾ ಮಸೀದಿಯಲ್ಲಿ ಜನಾಝಾ ನಮಾಝ್ ನೆರವೇರಿಸಿದ ಬಳಿಕ ಶಕ್ಕರ ಬೌಲಿ ಖಬರಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story




