RAICHURU | ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ

ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಮುಂಜಾನೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಾಮೀಜಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ತಿಂಥಣಿಯ ಕನಕ ಗುರು ಪೀಠದಲ್ಲೇ ಹಾಲುಮತದ ಪದ್ಧತಿಯಂತೆ ಸ್ವಾಮೀಜಿಯ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
Next Story





