Sindhanur | ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆ ದಾಖಲು

ಸಿಂಧನೂರು : ಬೆಳಗಿನ ಉಪಹಾರ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥರಾಗಿ ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ನಡೆದಿದೆ.
ನಗರದ ಉದ್ಬಾಳ ರಸ್ತೆಯಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ವೆಜಿಟೇಬಲ್ ಪಲಾವ್ ಉಪಹಾರ ಮಾಡಿದ್ದು, ಪಲಾವ್ ನಲ್ಲಿ ಹುಳುಗಳು ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಕೆಲವು ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಕೆಲವರು ಉಪಹಾರ ಸೇವಿಸಿಲ್ಲ. ಉಪಹಾರ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಿಗೆ ತಲೆ ಸುತ್ತು, ಹೊಟ್ಟೆ ನೋವು ಹಾಗೂ ವಾಂತಿ ಶುರುವಾಗಿದ್ದು, ನಂತರ ವಿದ್ಯಾರ್ಥಿಗಳನ್ನು ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಾವೇರಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Next Story




