ಸಿಂಧನೂರು: ಬೀದಿ ನಾಯಿಗಳ ದಾಳಿಗೆ ಮಗು ಬಲಿ

ಸಾಂದರ್ಭಿಕ ಚಿತ್ರ (AI)
ರಾಯಚೂರು: ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗುವೊಂದು ಮೃತಪಟ್ಟಿರುವ ಘಟನೆ ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪಿನ ಮನೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಮೃತ ಮಗುವನ್ನು ಅನಂ (1 ವರ್ಷ 8 ತಿಂಗಳು) ಎಂದು ಗುರುತಿಸಲಾಗಿದೆ. ಪಾಲಕರು ಮನೆ ಮುಂದೆ ಸೀರೆ ಕಟ್ಟಿ ತೊಟ್ಟಿಲಲ್ಲಿ ಮಗುವನ್ನು ಮಲಗಿಸಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಮಗು ಎದ್ದು ಪಾಲಕರ ಬಳಿ ತೆರಳುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದು, ಮಗು ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸಿಪಿಐ ವಿನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹವನ್ನು ರಾಯಚೂರಿನ ವಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
Next Story




