Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Sindhanur | ಜೋಳದ ಹಣ ಪಾವತಿಗೆ...

Sindhanur | ಜೋಳದ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Jun 2026 6:06 PM IST
share
Sindhanur | ಜೋಳದ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಸಿಂಧನೂರು : ಸರ್ಕಾರಕ್ಕೆ ಮಾರಾಟ ಮಾಡಿದ ಜೋಳದ ಹಣವನ್ನು ತಕ್ಷಣ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ರಾಯಚೂರು ರಸ್ತೆಯ ಪೋತ್ನಾಳ–ಬಳಗಾನೂರು ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇದರಿಂದ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಗಳಿಗೆ ಅಗತ್ಯವಿರುವ ಹಣದ ಕೊರತೆ ಎದುರಾಗಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜೋಳ ಮಾರಾಟ ಮಾಡಿದ ರೈತರು ಹಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಬೆಳೆ ಬೆಳೆಯಲು ಮೂರು ತಿಂಗಳು ಹಾಗೂ ಫಸಲು ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ರೈತರ ಕೈಗೆ ಇನ್ನೂ ಒಂದು ರೂಪಾಯಿಯೂ ಬಂದಿಲ್ಲ. ಕೃಷಿ ಚಟುವಟಿಕೆಗಳಿಗೆ ಹಣವಿಲ್ಲದೆ ರೈತರು ಖಾಸಗಿ ಸಾಲಗಾರರ ಮೊರೆ ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಒಟ್ಟು ಆರು ತಿಂಗಳು ಕಳೆದರೂ ರೈತರಿಗೆ ಪಾವತಿ ಆಗದಿದ್ದರೆ ಅವರು ಕೃಷಿ ಹೇಗೆ ಮಾಡಬೇಕು?” ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಸರ್ಕಾರ ತಕ್ಷಣ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಅರುಣ್ ಹೆಚ್. ದೇಸಾಯಿ ರೈತರಿಂದ ಮನವಿ ಸ್ವೀಕರಿಸಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಪಿಐ ವಿನಾಯಕ ಹಾಗೂ ಪಿಎಸ್‌ಐ ಎರಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅಮೀನ್ ಪಾಷಾ ದಿದ್ದಗಿ, ಬಸವರಾಜ ಹಂಚಿನಾಳ, ಶಿವನಗೌಡ ತಿಡಿಗೋಳ, ಇಸೂಫ್ ಸಾಬ್, ಅಣ್ಣಪ್ಪ, ವೀರೇಶ, ಖಾದರ್, ಚೆನ್ನನಗೌಡ, ಚನ್ನಯ್ಯ, ಚೆನ್ನಬಸವ ರಾಗಲಪರ್ವಿ, ಬಸಣ್ಣ ಪುಲದಿನ್ನಿ, ನಾರಾಯಣಪ್ಪ, ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X