ಸಿಂಧನೂರು | ಲಾರಿ-ಬೈಕ್ ಢಿಕ್ಕಿ : ಸ್ಥಳದಲ್ಲೇ ವ್ಯಕ್ತಿ ಮೃತ್ಯು

ಸಿಂಧನೂರು : ಲಾರಿ ಬೈಕ್ ಗೆ ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಗರದ ಕುಷ್ಟಗಿ ಮುಖ್ಯ ರಸ್ತೆ ಕೂಡಲಸಂಗಮ ಚಿತ್ರಮಂದಿರದ ಬಳಿ ನಡೆದಿದೆ.
ತಾಲ್ಲೂಕಿನ ಅರಳಹಳ್ಳಿ ಗ್ರಾಮದ ಹುಸೇನಪ್ಪ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ನಗರದ ಎಪಿಎಂಸಿಯಲ್ಲಿ ಹಮಾಲಿ ಕೆಲಸ ಮುಗಿಸಿಕೊಂಡು ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಪಿಐ ದುರುಗಪ್ಪ ಡೊಳ್ಳಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story