ಸಿಂಧನೂರು | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟ ವ್ಯಕ್ತಿ ಮೃತ್ಯು

ಸಿಂಧನೂರು: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಗರದ ಬಸ್ ನಿಲ್ದಾಣದ ಎದುರು ನಡೆದಿದೆ.
ಬಸ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ನುಗ್ಗಿದ ಪರಿಣಾಮ ಬಸ್ ಅವರ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ನಡಿಗೆ ವ್ಯಕ್ತಿ ನುಗ್ಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನಾ ಸ್ಥಳಕ್ಕೆ ನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮೃತ ವ್ಯಕ್ತಿಯ ಊರು ಹಾಗೂ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




