ಸಿಂಧನೂರು | ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ : ದೂರು ದಾಖಲು

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಪ್ರಶಾಂತ ನಗರದಲ್ಲಿ ಮಹಿಳೆಯೊರ್ವರು ನಡೆದುಕೊಂಡು ಹೋಗುವಾಗ ಕಳ್ಳನೊರ್ವ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಘಟನೆಯ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆದ ವಿಡಿಯೋ ಆಧಾರಿಸಿ ಅನುಮಾನಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Next Story





