Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | ಸಾವಿನ ದವಡೆಯಲ್ಲಿದ್ದ...

ಸಿಂಧನೂರು | ಸಾವಿನ ದವಡೆಯಲ್ಲಿದ್ದ ತಾಯಿ-ಮಗುವಿಗೆ ಮರುಜನ್ಮ

ವಾರ್ತಾಭಾರತಿವಾರ್ತಾಭಾರತಿ11 May 2026 10:58 PM IST
share
ಸಿಂಧನೂರು | ಸಾವಿನ ದವಡೆಯಲ್ಲಿದ್ದ ತಾಯಿ-ಮಗುವಿಗೆ ಮರುಜನ್ಮ
ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ಸಾಹಸ

ರಾಯಚೂರು : ಸರಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರ ನಡುವೆ ಸಿಂಧನೂರಿನ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗವು ಅಸಾಧ್ಯವಾದುದನ್ನು ಸಾಧ್ಯವಾಗಿಸಿ ತೋರಿಸಿದ್ದಾರೆ. ಅತ್ಯಂತ ಸಂಕೀರ್ಣವಾದ ವೈದ್ಯಕೀಯ ಸ್ಥಿತಿಯಲ್ಲಿದ್ದ ಗರ್ಭಿಣಿಯೊಬ್ಬರನ್ನು ಸಾವಿನ ದವಡೆಯಿಂದ ಮರಳಿ ತರುವ ಮೂಲಕ ಮಾನವೀಯತೆ ಮತ್ತು ವೃತ್ತಿಪರತೆಗೆ ಹೊಸ ಭಾಷ್ಯ ಬರೆದಿದ್ದಾರೆ.

ಸೃಷ್ಟಿ ಎಂಬ 34 ವಾರಗಳ ಗರ್ಭಿಣಿ ತೀವ್ರ ರಕ್ತದೊತ್ತಡದೊಂದಿಗೆ (210/120 ಎಮ್‌ಎಮ್ ಹೆಚ್ಜಿ) ಆಸ್ಪತ್ರೆಗೆ ದಾಖಲಾದಾಗ ಅವರ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು (Pulmonary Oedema), ಆಮ್ಲಜನಕದ ಮಟ್ಟ ಕೇವಲ (Sp02) ಶೇ. 40ಕ್ಕೆ ಕುಸಿದಿತ್ತು. ವೈದ್ಯಕೀಯ ಭಾಷೆಯಲ್ಲಿ ಇದನ್ನು ನಿಯರ್ ಮಿಸ್ (Near Miss) ಕೇಸ್ ಎನ್ನಲಾಗುತ್ತದೆ. ರೋಗಿಯನ್ನು ಉನ್ನತ ಚಿಕಿತ್ಸೆಗಾಗಿ ರಾಯಚೂರಿಗೆ ಕಳುಹಿಸಲು ಸಮಯವೇ ಇರಲಿಲ್ಲ, ಪ್ರತಿ ಸೆಕೆಂಡ್ ಕೂಡ ಪ್ರಾಣಾಪಾಯವನ್ನು ಹೊತ್ತು ತಂದಿತ್ತು. ಇಂತಹ ಸಂದರ್ಭದಲ್ಲಿ ಎದೆಗುಂದದ ತಾಯಿ ಮಕ್ಕಳ ಆಸ್ಪತ್ರೆಯ ತಂಡವು ತಕ್ಷಣವೇ ಕಾರ್ಯಪ್ರವೃತ್ತವಾಯಿತು. ತುರ್ತಾಗಿ ಖಾಸಗಿ ಆಸ್ಪತ್ರೆಯಿಂದ ವೆಂಟಿಲೇಟರ್ ವ್ಯವಸ್ಥೆ ಮಾಡಲಾಯಿತು. ಒಂದು ಕಡೆ ರೋಗಿಯ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದ್ದರೆ, ಮತ್ತೊಂದೆಡೆ ವೈದ್ಯರ ತಂಡವು ಜೀವ ಉಳಿಸುವ ಪಣ ತೊಟ್ಟಿತು. ಆನ್ ಟೇಬಲ್ ಡೆತ್ ಸಂಭವಿಸುವ ಅಪಾಯವಿದ್ದರೂ ರೋಗಿಯ ಪೋಷಕರು ವೈದ್ಯರ ಮೇಲೆ ನಂಬಿಕೆಯಿಟ್ಟು ಶಸ್ತ್ರ ಚಿಕಿತ್ಸೆಗೆ ಒಪ್ಪಿಗೆ ನೀಡಿದರು.

ವೈದ್ಯರಾದ ಡಾ.ಶಕುಂತಲಾ ಪಾಟೀಲ್, ಡಾ.ಕಾವೇರಿ ಶಾವಿ, ಡಾ.ವಿದ್ಯಾ, ಡಾ.ಶೋಭಾ, ಡಾ.ಫರ್ಹತ್ ಮತ್ತು ಡಾ.ಹನುಮಂತ ರೆಡ್ಡಿ ಅವರ ನೇತೃತ್ವದ ತಂಡವು ಯಶಸ್ವಿಯಾಗಿ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ಮಗುವನ್ನು ಜೀವಂತವಾಗಿ ಹೊರತೆಗೆದರು. ಶಸ್ತ್ರ ಚಿಕಿತ್ಸೆಯ ನಂತರ ತಾಯಿಯನ್ನು ಹೆಚ್ಚಿನ ನಿಗಾಕ್ಕಾಗಿ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಯಿತು.

ಈ ಯಶಸ್ಸಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಾದ ಡಾ.ಸುರೇಂದ್ರ ಬಾಬು, ಮತ್ತು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರ ಬೆಂಬಲ ಹಾಗೂ ಪ್ರೇರಣೆ ಬಹುದೊಡ್ಡ ಶಕ್ತಿಯಾಗಿತ್ತು. ವ್ಯವಸ್ಥೆಯ ನಡುವೆ ಮಿಂಚಿದ ಸೇವೆಯು, ಸರಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯಕೀಯ ತಂಡ, ಸುಸಜ್ಜಿತ ಕಟ್ಟಡ, ಗುಣಮಟ್ಟದ ಅತ್ಯಾಧುನಿಕ ಸಲಕರಣೆಗಳು, ರಾಷ್ಟ್ರೀಯ ಗುಣಮಟ್ಟದ ಹೆರಿಗೆ ಕೊಠಡಿ, ವಾರ್ಡ್, ಬೇಬಿ ವಾರ್ಮರ್, ಬಾಣಂತಿಗೆ ಪೌಷ್ಟಿಕ ಆಹಾರ, ಸೂಕ್ತ ಆರೈಕೆ, ಔಷಧಿ ವಿತರಣೆ, ಮನೆಗೆ ಬಿಡಲು ನಗುಮಗು ವಾಹನ ಲಭ್ಯತೆ ಇರುವುದನ್ನು ಖಾತರಿಪಡಿಸಿವೆ.

ಕೆಲವು ಅನಗತ್ಯ ಸಾಮಾಜಿಕ ಒತ್ತಡಗಳ ನಡುವೆಯೂ ಈ ಸಾಧನೆ ಮಾಡಲಾಗಿದೆ ಎಂಬುದು ಗಮನಾರ್ಹ. ವೈದ್ಯರಿಗೆ ಒತ್ತಡರಹಿತ ವಾತಾವರಣ ಮತ್ತು ಸಾರ್ವಜನಿಕರ ವಿಶ್ವಾಸ ಸಿಕ್ಕರೆ ಇಂತಹ ಪವಾಡಗಳನ್ನು ಮಾಡಲು ಸಾಧ್ಯ ಎಂದು ಈ ಘಟನೆ ಸಾಬೀತುಪಡಿಸಿದೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ ಈ ವೈಟ್ ಕೋಟ್ ಯೋಧರಿಗೆ ಮತ್ತು ಅವರಿಗೆ ಸಾಥ್ ನೀಡಿದ ಶುಶ್ರೂಷಣಾ ಅಧಿಕಾರಿಗಳಾದ ಶಾರದಾ, ಜಯಂತಿ, ಪುಷ್ಪರಾಣಿ, ಗೌತಮಿ, ಚೈತ್ರಾ ಹಾಗೂ ಇತರ ಸಿಬ್ಬಂದಿ ವರ್ಗದ ಶ್ರಮವು ಇದರ ಹಿಂದೆ ಇದೆ ಎಂದು ಸಿಂಧನೂರಿನ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಫಲಿಸಿದ ಶ್ರಮ, ಚೇತರಿಸಿಕೊಂಡ ತಾಯಿ-ಮಗು

ವೈದ್ಯಕೀಯ ತಂಡದ ಸತತ ಪರಿಶ್ರಮದ ಫಲವಾಗಿ ಸೃಷ್ಟಿ ಅವರು ಇದೀಗ ವೆಂಟಿಲೇಟರ್‌ನಿಂದ ಹೊರಬಂದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಮಗು ಕೂಡ ಎನ್‌ಐಸಿಯುನಲ್ಲಿ ಸುರಕ್ಷಿತವಾಗಿದ್ದು, ಒಂದು ದೊಡ್ಡ ದುರಂತವು ಪವಾಡ ಸದೃಶವಾಗಿ ಸುಖಾಂತ್ಯ ಕಂಡಿದೆ.

Tags

Sindhanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X