ಸಿಂಧನೂರು | ದ್ವಿತೀಯ ಪಿಯುಸಿ ಪರೀಕ್ಷೆ : 3,752 ವಿದ್ಯಾರ್ಥಿಗಳು ಹಾಜರು, 252 ಗೈರು

ಸಿಂಧನೂರು : ನಗರದ 9 ಪರೀಕ್ಷೆ ಕೇಂದ್ರಗಳಲ್ಲಿ ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, 3,752 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದು, 252 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಶನಿವಾರ ಕನ್ನಡ ವಿಷಯದ ಪರೀಕ್ಷೆ ನಡೆದಿದ್ದು, ತಾಲ್ಲೂಕಿನ 9 ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗಿದೆ. ಪಿಯುಸಿ ಪರೀಕ್ಷೆ ಬರೆಯಲು 4,004 ವಿದ್ಯಾರ್ಥಿಗಳು ದಾಖಲಾತಿಯಾಗಿದ್ದರು. ನಗರದ ಎವಿಎಸ್ ಬ್ರಿಲಿಯಂಟ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಎರಡು ಕಾಲು ಇಲ್ಲದ ವಿದ್ಯಾರ್ಥಿನಿಯೊಬ್ಬರು ಪರೀಕ್ಷೆ ಬರೆದಿದ್ದು, ವಿಶೇಷವಾಗಿದೆ.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿತ್ತು.
Next Story





