Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ...

ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ ವಾರ್ತಾಭಾರತಿ ಮಾಧ್ಯಮವನ್ನು ಬೆಂಬಲಿಸಬೇಕು : ವಿರಕ್ತಮಠದ ಮಹಾಲಿಂಗ ಮಹಾಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Nov 2025 7:32 PM IST
share
ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ ವಾರ್ತಾಭಾರತಿ ಮಾಧ್ಯಮವನ್ನು ಬೆಂಬಲಿಸಬೇಕು : ವಿರಕ್ತಮಠದ ಮಹಾಲಿಂಗ ಮಹಾಸ್ವಾಮಿ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಸಿಂಧನೂರಿನಲ್ಲಿ ಓದುಗ, ಹಿತೈಷಿಗಳ ಸಭೆ

ಸಿಂಧನೂರು : ಪತ್ರಿಕೆಗಳು ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸ ಮಾಡಬೇಕು. ಆದರೆ ಇಂದು ಸುಳ್ಳು ಸುದ್ದಿ, ಅರೆ ಸತ್ಯ, ತಮಗೆ ಬೇಕಾಗಿದ ವಿಷಯ ವಸ್ತುವನ್ನು ಮಾತ್ರ ಸುದ್ದಿಯ ರೂಪದಲ್ಲಿ ನೀಡುವ ಕೆಲಸ ನಡೆಯುತ್ತಿದೆ. ವಾರ್ತಾಭಾರತಿ ಸೇರಿದಂತೆ ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ ಮಾಧ್ಯಮಗಳಿಗೆ ನಾವೆಲ್ಲರೂ ಬೆಂಬಲಿಸಬೇಕಿದೆ ಎಂದು ಯದ್ದಲದೊಡ್ಡಿ ವಿರಕ್ತಮಠದ ಶ್ರೀ ಮಹಾಲಿಂಗ ಮಹಾಸ್ವಾಮಿ ಹೇಳಿದ್ದಾರೆ.

ವಾರ್ತಾ ಭಾರತಿಯ ಕಲ್ಯಾಣ ಕರ್ನಾಟಕ ಆವೃತ್ತಿ ಬಿಡುಗಡೆ ಪ್ರಯುಕ್ತ ಸಿಂಧನೂರು ತಾಲೂಕಿನ ಮಿಲಾಪ್ ಶಾದಿ ಮಹಲ್ ನಲ್ಲಿ ಏರ್ಪಡಿಸಿದ್ದ ಓದುಗರು, ವೀಕ್ಷಕರು ಹಾಗೂ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ವಿರಕ್ತಮಠದ ಶ್ರೀ ಮಹಾಲಿಂಗ ಮಹಾಸ್ವಾಮಿ, ಇಂದಿನ ಪತ್ರಿಕೆಗಳಲ್ಲಿ ಏಕೆ ಮುಖವಾಗಿ ಕೆಲಸ ಮಾಡುತ್ತಿರುವುದು ವಿಷಾದನೀಯ ಸಂಗತಿ. ಅನೇಕ ಪತ್ರಿಕೆ ಆಳುವ ವರ್ಗದ ಪರವಾಗಿವೆ ಎಂದು ಆರೋಪವಿದೆ. ಆದ್ದರಿಂದ ನೈಜ ಸುದ್ದಿಗಳನ್ನು ಬಿತ್ತರಿಸುವ ಪತ್ರಿಕೆಗಳಿಗೆ ನಾವೆಲ್ಲರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪ್ರಗತಿಪರ ಚಿಂತಕ ಚಂದ್ರಶೇಖರ ಗೋರೆಬಾಳ ಮಾತನಾಡಿ, ಆಧುನಿಕ ಯುಗದಲ್ಲಿ ಮಾಧ್ಯಮಗಳು ಕಾರ್ಪೋರೆಟ್ ಸಂಸ್ಥೆಗಳ ಕಪಿಮುಷ್ಠಿಯಲ್ಲಿದ್ದು ಸಾಮಾನ್ಯ ಜನರಿಂದ ದೂರವಾಗುತ್ತಿವೆ. ಜನರ ಧ್ವನಿಯಾಗಬೇಕಿದ್ದ ಮಾಧ್ಯಮಗಳು ಸಂಕ್ರಮಣ ಸ್ಥಿತಿಯಲ್ಲಿವೆ. ಸುದ್ದಿ ಸುದ್ದಿ ಸುದ್ದಿಯಾಗಿ ಉಳಿಯದೇ ಕಾರ್ಪೋರೇಟ್‌ ಜಾಲದಲ್ಲಿ ಬಂಧನವಾಗಿದೆ. ಇವೆಲ್ಲದರ ನಡುವೆ ನೈಜ ಸುದ್ದಿ ನೀಡುತ್ತಾ ವಾರ್ತಾಭಾರತಿ ಮಾಧ್ಯಮ ಪತ್ರಿಕಾ ಧರ್ಮವನ್ನು ಕಾಪಾಡಿಕೊಂಡಿವೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಡತನ, ನಿರುದ್ಯೋಗ, ಗುಳೆ ಸಮಸ್ಯೆ, ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ಅನೇಕ ಜ್ವಲಂತ ಸಮಸ್ಯೆಗಳಿವೆ. ಹಿಂದುಳಿದ ಕಲ್ಯಾಣ ಕರ್ನಾಟಕ ಸುದ್ದಿ ನೀಡುವಲ್ಲಿಯೂ ಹಿಂದುಳಿದಂತೆ ಭಾಸವಾಗುತ್ತಿದೆ. ಜನಧ್ವನಿಯಾಗಿ ಕೆಲಸ ಮಾಡುವ ವಾರ್ತಾಭಾರತಿ ಪ್ರಾರಂಭವಾಗಿ 23 ವರ್ಷಗಳಾದರೂ ಈ ಭಾಗದಲ್ಲಿ ಶುರುವಾಗದಿದ್ದಕ್ಕೆ ಬೇಸರವಿತ್ತು. ಈಗ ಆರಂಭವಾಗುತ್ತಿದ್ದು‌ ಸಾಕಷ್ಟು‌ ಆಶಾಭಾವನೆ ಇದೆ. ತಡವಾಗಿಯಾದರೂ ಆರಂಭವಾಗಿದ್ದು ಒಳ್ಳೆಯ‌ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಸಿಪಿಐಎಂಎಲ್ ರಾಜ್ಯ ಮುಖಂಡ ಡಿ.ಹೆಚ್. ಪೂಜಾರ್ ಮಾತನಾಡಿ, ವಾರ್ತಾಭಾರತಿ ನನಗೆ ಹಳೆ ಪರಿಚಿತ ಪತ್ರಿಕೆ. ಹಿಂದೆ ಜನವಾಹಿನಿ, ಇಂದು ವಾರ್ತಾ ಭಾರತಿ ನನಗೆ ಮುಖ್ಯವಾಗಿದೆ. ಸಮಾಜಲ್ಲಿ ಶಾಂತಿ ಬಯಸುವ ಎಲ್ಲರೂ ಸರಿಯಾದ ಮಾಧ್ಯಮವನ್ನು ಬೆಳೆಸಬೇಕಾಗಿದೆ. ಇಂದು 90% ಮಾಧ್ಯಮಗಳು ಅದಾನಿ, ಅಂಬಾನಿಗಳ ಕೈಯಲ್ಲಿವೆ. ನಿಜ ಸಾರುವ ಪತ್ರಿಕೆಗಳು ಸಕಾಲದಲ್ಲಿವೆ. ಇದರಿಂದಾಗಿಇಂತಹ ಪತ್ರಿಕೆಯನ್ನು ನಾವು ಕೊಂಡು ಓದುವ ಮೂಲಕ ಬಲ ತುಂಬಬೇಕು ಎಂದು ಮನವಿ ಮಾಡಿದರು.

ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು ಮಾತನಾಡಿ, ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಪರಸ್ಪರ ತಮ್ಮ ಜವಾಬ್ದಾರಿ ನಿರ್ವಹಿಸಿದರೆ ಸಮಾಜ ನೆಮ್ಮದಿಯಾಗಿರುತ್ತದೆ. ನಾಲ್ಕನೇ ಅಂಗವಾಗಿ ಮಾಧ್ಯಮಕ್ಕೆ ಸ್ಥಾನ ನೀಡಿದ್ದು ಇದು ಉಳ್ಳವರ ಪರವಾಗಿರದೇ ಇಲ್ಲದವರ ಪರವಾಗಿರಬೇಕು. ಮಾಧ್ಯಮಗಳ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಜನಸಾಮಾನ್ಯರ, ಶೋಷಿತರ ಪರ ಧ್ವನಿಯಾಗಿ ಕೆಲಸ ಮಾಡುವ ಮಾಧ್ಯಮಗಳ ಜೊತೆ ನಿಲ್ಲುವುದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಯುವ ಮುಖಂಡ, ಜಿಶಾನ್ ಅಖಿಲ್ ಸಿದ್ದಿಕಿ ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ತಾ ಭಾರತಿ ನಮ್ಮ ಭಾಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಲುಪುತ್ತಿದೆ. ಪತ್ರಿಕೆ ಆಳುವವರ ಪರ ಕೆಲಸ ಮಾಡದೆ ಜನರ ಧ್ವನಿಯಾಗಿ ಕೆಲಸ ಮಾಡುತ್ತಾ 23 ವರ್ಷದಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ವೇಳೆ ವಾರ್ತಾಭಾರತಿ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆ ಮಾತನಾಡಿ, ಬೇರೆ ಪತ್ರಿಕೆಗೂ ವಾರ್ತಾಭಾರತಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಬೆಂಬಲಿಗರು ಓದುಗರು ಮತ್ತು ಸಾಮಾಜಿಕ ಕಳಕಳಿ ಇರುವ ಸದಸ್ಯರು. ನಾವು ಯಾವುದೇ ಜಾತಿ ಅಥವಾ ಪಕ್ಷದ ಮುಖವಾಣಿ ಆಗಲೂ ಬಯಸುವುದಿಲ್ಲ. ನಮ್ಮ ಪತ್ರಿಕೆಯಲ್ಲಿ ಮಾಹಿತಿ ಭಾಗ ಮತ್ತು ದಿನ ನಿತ್ಯದ ಸುದ್ದಿ ಭಾಗ ಇರುತ್ತದೆ. 23 ವರ್ಷಗಳಿಂದ ರಾಜಿ ಆಗದೆ ಸುದ್ದಿ ಬಿತ್ತರಿಸುತ್ತಾ ಬಂದಿದ್ದೇವೆ. ಡಿಸೆಂಬರ್ 20 ರಂದು ಕಲಬುರಗಿಯಿಂದ ಕಲ್ಯಾಣ ಕರ್ನಾಟಕ ಆವೃತ್ತಿ ಬಿಡುಗಡೆ ಕಲಬುರಗಿಯಲ್ಲಿ ನಡೆಯಲಿದ್ದು ತಾವೆಲ್ಲರೂ ನಮ್ಮ ಜೊತೆ ಇರಬೇಕು ಎಂದು ಹೇಳಿದರು.

ಈ ವೇಳೆ ಆರ್‌ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಸೋಮನಗೌಡ, ಜೀಲಾನಿ ಪಾಷಾ, ನೂರಾನಿ ಮಸ್ಜಿದ್ ಇಮಾಮ್ ಎ ಖತೀಬ್ ಮೌಲಾನಾ ತಾಜುದ್ದೀನ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶಂಕರ್ ವಾಲೇಕರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಡಿಸೆಂಬರ್‌ 20ರಂದು ಬೆಳಿಗ್ಗೆ 10.30ಕ್ಕೆ ಕಲಬುರಗಿಯ ಎಸ್‌ ಎಂ ಪಂಡಿತ್‌ ರಂಗ ಮಂದಿರದಲ್ಲಿ ವಾರ್ತಾಭಾರತಿ ಕಲ್ಯಾಣ ಕರ್ನಾಟಕ ಆವೃತಿ ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X