ಸಿಂಧನೂರು | ಮಹಿಳೆಯ ಸರಗಳ್ಳತನ ಪ್ರಕರಣ : ಆರೋಪಿಗಳ ಬಂಧನ, 20 ಬೈಕ್‌ಗಳು ವಶಕ್ಕೆ

ರಾಯಚೂರು : ಸಿಂಧನೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಒಂಟಿ ಮಹಿಳೆಯ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 16,35,00ರೂ. ಮೌಲ್ಯದ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಆರೀಫ್ (23), ಸಿದ್ದರಾಮಪ್ಪ(20) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
2 ಲಕ್ಷ ಬೆಲೆಬಾಳುವ 31.87 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಬಗ್ಗೆ ಮಹಿಳೆಯೋರ್ವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ಎಚ್ಚೆತ್ತ ಪೋಲಿಸರು ಪ್ರಕರಣದಲ್ಲಿ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಇದರ ಜೊತೆಗೆ ಸಿಂಧನೂರು ನಗರದಲ್ಲಿ ಕಳೆದ 6 ತಿಂಗಳಿನಿಂದ ಕಳ್ಳತನವಾದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಸರಗಳ್ಳತನ ಮತ್ತು ಬೈಕ್‌ಗಳ ಕಳ್ಳತನದಲ್ಲಿ ಭಾಗಿಯಾಗಿದ್ದರು ಎನ್ನುವುದು ತನಿಖೆಯ ವೇಳೆ ಬಯಲಾಗಿದೆ.
Next Story





