ಸಿಂಧನೂರು | ಕಾರಿಗೆ ಟಿಪ್ಪರ್ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ

ಸಿಂಧನೂರು: ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿ ಮುಖ್ಯ ರಸ್ತೆಯ ತೇಕ್ಕಲಕೋಟೆ ಸಮೀಪ ಸೋಮವಾರ ಸಂಜೆ ನಡೆದಿದೆ.
ತಾಲೂಕಿನ ತುರ್ವಿಹಾಳ ಪಟ್ಟದ ಸಮಾಜ ಸೇವಕ ಡಿ.ಶಂಕರಗೌಡ ದೇವರಮನಿ (40) ಹಾಗೂ ಸಿಂಧನೂರಿನ ಬಸವರಾಜ ಗೋರೆಬಾಳ್ (40) ಎಂಬುವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಳ್ಳಾರಿಯಲ್ಲಿ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕಾರಿನಲ್ಲಿ ಐವರು ವಾಪಸ್ ಬರುತ್ತಿರುವಾಗ ಟಿಪ್ಪರ್ ಹಾಗೂ ಕಾರಿನ ಮಧ್ಯೆ ಢಿಕ್ಕಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Next Story





