Sindhnur | ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳಿಗೆ ಕಾರು, ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಸಿಂಧನೂರು: ಸ್ವಾವಲಂಬಿ ಸಾರಥಿ ಯೋಜನೆಯಡಿ ವಿವಿಧ ನಿಗಮಗಳಿಂದ ಆಯ್ಕೆಯಾದ ಫಲಾನುಭವಿಗಳಿಗೆ 6 ಕಾರುಗಳು ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ವಿಶೇಷ ಚೇತನರಿಗೆ 5 ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ವಿತರಿಸಿದರು.
ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಜನಪರ ಯೋಜನೆಗಳು ಕೇವಲ ಕಡತಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಬೇಕು ಎಂದು ಹೇಳಿದರು.
ಆರ್ಥಿಕವಾಗಿ ಹಿಂದುಳಿದವರು ಹಾಗೂ ವಿಶೇಷ ಚೇತನರು ಸ್ವಾಭಿಮಾನದಿಂದ ಸ್ವಾವಲಂಬಿ ಜೀವನ ನಡೆಸಲು ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರ್ಕಾರ ನೀಡಿರುವ ವಾಹನಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಫಲಾನುಭವಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ನಿಗಮಗಳ ಅಧಿಕಾರಿಗಳು, ಫಲಾನುಭವಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Next Story




