ಸಿರವಾರ | ಮಲ್ಲಟ ಗ್ರಾಮ ಪಂಚಾಯತ್‌ನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ನಾಲ್ಕು ಗೋಡೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಕೈಯಾಡಿಸದ ಕ್ಷೇತ್ರವಿಲ್ಲ : ಖಾಜಪಾಷ

ಸಿರವಾರ : ಹೆಣ್ಣು ಸಂಸಾರದ ಕಣ್ಣು, ಹೆಣ್ಣೆಂದರೆ ಮನೆಯ ಬೆಳಗುವ ದೀಪ. ನಾಲ್ಕು ಗೋಡೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಕೈಯಾಡಿಸದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರದಲ್ಲಿ ಗಂಡಿಗೆ ಸಮಾನವಾಗಿ ನಿಂತಿದ್ದಾಳೆ. ತನ್ನದೇ ಛಾಪು ಮೂಡಿಸಿ ತಾನು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಭೀತು ಪಡಿಸಿದ್ದಾಳೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಖಾಜಪಾಷ ಹೇಳಿದರು.
ತಾಲೂಕಿನ ಮಲ್ಲಟ್ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಅಂತರರಾಷ್ಟೀಯ ಮಹಿಳಾ ದಿನಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ನಂತರ ಮಾತನಾಡಿದ ಅವರು, ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ, ಅದು ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲೂ ತಮ್ಮದೇ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನು ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ. 1975ರ "ಅಂತರಾಷ್ಟ್ರೀಯ ಮಹಿಳೆಯರ ದಿನ"ದ ಸಮಯದಲ್ಲಿ, ಮಾ.8 ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಮ್ಮ ತಾಯಪ್ಪ, ಗ್ರಾಮ ಪಂಚಾಯತ್ ಸದ್ಯಸರು, ಸಿಂಬದ್ದಿ, ಸ್ವ ಸಹಾಯ ಸಂಘದ ಸದಸ್ಯರು ಸಂತೋಷ ,MBK ಗಂಗಮ್ಮ, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರಿದ್ದರು.





