ಸಿರವಾರ | ಸಾರಿಗೆ ಬಸ್ ಢಿಕ್ಕಿ, ಎರಡು ಎಮ್ಮೆ ಸಾವು

ಸಿರವಾರ: ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಎರಡು ಎಮ್ಮೆಗಳು ಸಾವನಪ್ಪಿರುವ ಘಟನೆ ಗುರುವಾರ ರಾತ್ರಿ ಪಟ್ಟಣದ ಹೊರವಲಯದ ಜೆಸ್ಕಾಂ ಕಚೇರಿಯ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ರಾಯಚೂರಿನಿಂದ ಲಿಂಗಸುಗೂರು ಕಡೆ ಹೊರಟಿದ್ದ ಸಾರಿಗೆ ಬಸ್ ರಸ್ತೆ ದಾಟುತ್ತಿದ್ದ ಎಮ್ಮೆಗಳಿಗೆ ಢಿಕ್ಕಿ ಹೊಡೆದಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಂದು ಎಮ್ಮೆ ಗಂಭೀರವಾಗಿ ಗಾಯಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಿರವಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





