Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿರಿವಾರ: ಗುತ್ತಿಗೆ ಪದ್ಧತಿ ರದ್ದು,...

ಸಿರಿವಾರ: ಗುತ್ತಿಗೆ ಪದ್ಧತಿ ರದ್ದು, ಕನಿಷ್ಠ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಸ್ತೆ ತಡೆ

ವಾರ್ತಾಭಾರತಿವಾರ್ತಾಭಾರತಿ10 April 2026 7:24 PM IST
share
ಸಿರಿವಾರ: ಗುತ್ತಿಗೆ ಪದ್ಧತಿ ರದ್ದು, ಕನಿಷ್ಠ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಸ್ತೆ ತಡೆ

ಸಿರಿವಾರ: ರಾಜ್ಯ ಹಾಗೂ ದೇಶದಾದ್ಯಂತ ಕಾರ್ಮಿಕರ ಬದುಕು ದಿನೇದಿನೇ ಸಂಕಷ್ಟಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ ₹42,000 ನಿಗದಿ ಮಾಡಬೇಕು, ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು) ಸಿರಿವಾರ ವಿಭಾಗದ ಸಮಿತಿ ವತಿಯಿಂದ ನಗರದ ಬಸ್ ನಿಲ್ದಾಣದ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ತುಂಗಭದ್ರಾ ನೀರಾವರಿ ಕಾರ್ಮಿಕ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷ ಕೆ. ನಾಗಲಿಂಗಸ್ವಾಮಿ ಅವರು, ರಾಜ್ಯ ಸರ್ಕಾರವು ಕನಿಷ್ಠ ವೇತನ ಪರಿಷ್ಕರಣೆಯಲ್ಲಿ ವಿಫಲವಾಗಿದೆ ಸಂಘಟನೆಗಳು ಆರೋಪಿಸಿವೆ. ಕಾನೂನು ಪ್ರಕಾರ ಐದು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡಬೇಕಾದರೂ ಕೊನೆಯದಾಗಿ 2017ರಲ್ಲಿ ಮಾತ್ರ ಪರಿಷ್ಕರಣೆ ನಡೆದಿದ್ದು, ಬಳಿಕ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. 2025ರಲ್ಲಿ ಸುಮಾರು ₹25,000ಕ್ಕೆ ಹೆಚ್ಚಿಸುವ ಪ್ರಾಥಮಿಕ ಅಧಿಸೂಚನೆ ಹೊರಬಂದಿದ್ದರೂ ಅದನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ಅವರು ಹೇಳಿದರು.

ಪ್ರಸ್ತುತ ವೇತನದಲ್ಲಿ ಆಹಾರ, ಬಟ್ಟೆ, ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ. ಒಬ್ಬ ಕಾರ್ಮಿಕನು ಗೌರವಯುತ ಜೀವನ ನಡೆಸಲು ಕನಿಷ್ಠ ₹42,000 ವೇತನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್‌ನ ಪ್ರಕಾರ ಕನಿಷ್ಠ ವೇತನ ನೀಡದಿರುವುದು ಬಲವಂತದ ಕೆಲಸಕ್ಕೆ ಸಮಾನವಾಗುತ್ತದೆ. ಆದಾಗ್ಯೂ ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಗ್ರಂಥಾಲಯಗಳು ಸೇರಿದಂತೆ ಅನೇಕ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಗುತ್ತಿಗೆ ಕಾರ್ಮಿಕರಿಗೆ ಕಾನೂನುಬದ್ಧ ವೇತನ ನೀಡಲಾಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಈ ಸಂದರ್ಭದಲ್ಲಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಕೆ ನಾಗಲಿಂಗ ಸ್ವಾಮಿ, ವಿಭಾಗದ ಅಧ್ಯಕ್ಷ ರಾಜಾಸಾಬ್, ಉಪ ವಿಭಾಗದ ಅಧ್ಯಕ್ಷರಾದ ವೆಂಕಟೇಶ್ ಕೋರಿ, ಈಶಪ್ಪ ಗೌಡ, ಚಂದು ಸಾಬ್, ಗೋಪಾಲ ರಾವ್, ನಾಗರಾಜ್ ಮಡಿವಾಳ, ಶಿವಪುತ್ರಪ್ಪ, ಹನುಮಂತ ನಾಯಕ, ನಾಗಲಿಕರ್ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags

Road BlockadeSirivaraRaichuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X