Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ಮತದಾರರ ವಿಶೇಷ ಮಿಂಚಿನ...

ರಾಯಚೂರಿನಲ್ಲಿ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Oct 2025 8:11 PM IST
share
ರಾಯಚೂರಿನಲ್ಲಿ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ

ರಾಯಚೂರು : ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು.

ಅ.27ರಂದು, ಸೋಮವಾರ ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅರ್ಹ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು, ಅಲ್ಲಿವರೆಗೆ ಕಾಯದೇ ಕೂಡಲೇ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಮತದಾರರ ಪರಿಷ್ಕರಣೆ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರಂದು ಪ್ರಕಟಿಸಿ ಡಿಸೆಂಬರ್ 10 ರೊಳಗೆ ಆಕ್ಷೇಪಣೆ ಸ್ವೀಕರಿಸಲಾಗುತ್ತದೆ.

ಅಂತಿಮ ಮತದಾರರ ಪಟ್ಟಿಯನ್ನು 2025ರ ಡಿಸೆಂಬರ್ 30 ರಂದು ಪ್ರಕಟಿಸಲಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಈ ಕಚೇರಿಗಳಿಗೆ ಕಾಲಮಿತಿಯಲ್ಲಿ ಅರ್ಜಿ, ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದರು.

ಶೇ.100ರಷ್ಟು ನೋಂದಣಿ ಮಾಡಿ :

ರಿಮ್ಸ್ ಸಂಸ್ಥೆಯ ಎಲ್ಲ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಮತದಾನ ಮಾಡುವ ಹಕ್ಕನ್ನು ನೀಡಿದೆ. ಹೆಸರು ನೋಂದಣಿ ಮಾಡಿಸಿದ್ದಲ್ಲಿ ಮಾತ್ರ ಮತದಾನ ಮಾಡಲಿಕ್ಕೆ ಅವಕಾಶ ಸಿಗಲಿದೆ ಎಂದು ತಿಳಿಸಿದರು.

ಹೆಸರು ಸೇರಿಸಲು ಅರ್ಹತೆ :

ಭಾರತದ ಪ್ರಜೆಯಾಗಿರುವ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ, ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಅರ್ಜಿಯೊಂದಿಗೆ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪಡೆದ ಪ್ರಮಾಣ ಪತ್ರ ಲಗತ್ತಿಸಬೇಕು ಎಂದು ತಿಳಿಸಿದರು.

ಈ ವೇಳೆ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ, ಮತದಾನದ ಮೂಲಕ ಅರ್ಹರ ಆಯ್ಕೆಗೆ ಅನುಕೂಲ ಕಲ್ಪಿಸುವ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನು ಅರಿಯಬೇಕು‌. ಶಿಕ್ಷಕರ ಕ್ಷೇತ್ರದ ಮತದಾರರಾದಲ್ಲಿ ತಾವು ಮತದಾನಕ್ಕೆ ಅರ್ಹರಾಗಿ, ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ತಾವು ಇಚ್ಛಿಸುವ ಪ್ರತಿನಿಧಿಯ ಆಯ್ಕೆಗೆ ಮತದಾನಕ್ಕೆ ಅವಕಾಶ ಸಿಗಲಿದೆ ಎಂದು ಸಲಹೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಹೆಚ್.ರಮೇಶ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಅಧಿಕಾರಿ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ರಾಯಚೂರು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ, ರಿಮ್ಸ್ ಸಂಸ್ಥೆಯ ಹೆಚ್ಚುವರಿ ಪ್ರಾಂಶುಪಾಲರಾದ ಮಂಜುನಾಥ, ಔಷಧ ವಿಭಾಗದ ಹೆಚ್‌ಒಡಿ ಡಾ.ಬಸವರಾಜ ಎಮ್.ಪಾಟೀಲ್, ಔಷಧ ವಿಭಾಗದ ಹೆಚ್ಚುವರಿ ಅಧಿಕಾರಿ ಡಾ.ಅರವಿಂದ ಸಂಗಾವಿ, ಶಿಶು ಅಭಿವೃದ್ಧಿ ಅಧಿಕಾರಿ ಮಂಜುನಾಥ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಮತದಾರ ಸಾಕ್ಷರತಾ ಕ್ಲಬ್ ನ ನೋಡಲ್ ಅಧಿಕಾರಿ ಡಾ.ದಂಡಪ್ಪ ಬಿರಾದಾರ, ಚುನಾವಣಾ ಮಾಸ್ಟರ್ ಟ್ರೈನರ್ ಸದಾಶಿವಪ್ಪ, ಡಾ.ದಂಡಪ್ಪ ಬಿರಾದಾರ್ ಸೇರಿದಂತೆ ಇನ್ನೀತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X