ದೇವದುರ್ಗದ ಕವಿತಾ ದೇಸಾಯಿ ಅವರಿಗೆ ರಾಜ್ಯ ಮಟ್ಟದ ಬಸವ ಪುರಸ್ಕಾರ

ದೇವದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಕವಿತಾ ಆರ್. ದೇಸಾಯಿ ಅವರಿಗೆ ರಾಜ್ಯ ಮಟ್ಟದ ಬಸವ ಪುರಸ್ಕಾರ ಲಭಿಸಿದೆ ಎಂದು ವಸಂತ ಲಕ್ಷ್ಮೀ ಫೌಂಡೇಶನ್ ಹಾಗೂ ಶರಣ ಸೇವಾ ಸಮಿತಿ ಬೆಂಗಳೂರು ಅಧ್ಯಕ್ಷೆ ಡಾ. ಪೂಜಾ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಸವ ಜಯಂತಿ ಅಂಗವಾಗಿ ಮೇ 10ರಂದು ಬೆಂಗಳೂರಿನ ಸಂಜಯನಗರದ ರಮಣಶ್ರೀ ಸಭಾಂಗಣದಲ್ಲಿ ಬಸವ ಜಯಂತಿ ಸಮಾರಂಭ ನಡೆಯಲಿದೆ ಎಂದು ಹೇಳಿದರು.
ಈ ಸಮಾರಂಭದಲ್ಲಿ ಕಂದಾಯ ಇಲಾಖೆಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಕವಿತಾ ಆರ್. ದೇಸಾಯಿ ಅವರನ್ನು ಬಸವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ಮಹಾದೇವ ಪಾಟೀಲ್ ಮೂಲಿಮನಿ, ಕರ್ನಾಟಕ ಸರ್ಕಾರಿ ನೌಕರರ ಸಂಘ ತಾಲೂಕು ಸಮಿತಿ ದೇವದುರ್ಗದ ಪ್ರಧಾನ ಕಾರ್ಯದರ್ಶಿಗಳಿಗೂ ಪುರಸ್ಕಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಮಾಜಸೇವೆ ಸಲ್ಲಿಸಿದ ಗಣ್ಯರನ್ನು ಇದೇ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




