ಮಸ್ಕಿ ಪುರಸಭೆ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧವಾಗಿ ಆಯ್ಕೆ

ರಾಯಚೂರು: ಮಸ್ಕಿ ಪುರಸಭೆಯ ನೂತನ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಮಲ್ಲಯ್ಯ ಅಂಬಾಡಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಸೋಮವಾರ ಚುನಾವಣೆ ನಡೆಯಿತು.
ಪುರಸಭೆಯ ವಾರ್ಡ್ ನಂ16ರ ಸದಸ್ಯ ಸುರೇಶ ಹರಸೂರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ತಹಶೀಲ್ದಾರ್ ಮಂಜುನಾಥ್ ಬೋಗಾವತಿ ಘೋಷಿಸಿದರು.
ಪುರಸಭೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಸುರೇಶ್ ಹರಸೂರ, ಪಟ್ಟಣದಲ್ಲಿ ಸಾರ್ವಜನಿಕರಿಗೆ ಪುರಸಭೆಯಿಂದ ನೀಡಬೇಕಾದ ಮೂಲಭೂತ ಸೌಲಭ್ಯಗಳನ್ನು ನೀಡಲು ಎಲ್ಲಾ ಸದಸ್ಯರ ಸಹಕಾರದಿಂದ ಶ್ರಮಿಸುತ್ತೇನೆ ಎಂದು ಹೇಳಿದರು.
Next Story





