ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಿ: ರಾಜ್ಯ ರೈತ ಸಂಘ ಒತ್ತಾಯ

ರಾಯಚೂರು: ಜಿಲ್ಲೆಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಲು ರಾಜ್ಯ ಸರಕಾರ ಕೂಡಲೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಪಾಟೀಲ್ ಒತ್ತಾಯಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಪ್ರಭಾಕರ್ ಪಾಟೀಲ್, ರಾಜ್ಯ ಸರಕಾರ ಈ ಹಿಂದೆ ಜಿಲ್ಲೆಯಲ್ಲಿ ಮೆಣಸಿನ ಕಾಯಿ ಮಾರುಕಟ್ಟೆ ಸ್ಥಾಪಿಸಲು 25ಕೋಟಿ ರೂ. ಬಿಡುಗಡೆಗೊಳಿಸಲು ತೀರ್ಮಾನಿಸಿತ್ತು. ಆದರೆ ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿ, ಮಾರುಕಟ್ಟೆ ಸ್ಥಾಪಿಸುವಲ್ಲಿ ಇಚ್ಛಾಶಕ್ತಿ ಪ್ರಸರ್ಶಿಸಿಲ್ಲ. ಈಗಾಗಲೇ ರಾಯಚೂರಿನ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಸರ್ವೆ ನಂ.277 ಹಾಗೂ 290 ಜಮೀನುಗಳನ್ನು ಗುರುತಿಸಲಾಗಿದೆ. ಕೂಡಲೆ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಮಾರುಕಟ್ಟೆ ಸ್ಥಾಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಹುಸೇನಬಾಷ, ಹಾಜಿ ಮಲ್ಲಂಗ, ಹನುಮಗೌಡ, ತಿಮ್ಮನ ಗೌಡ ಉಪಸ್ಥಿತರಿದ್ದರು.
Next Story





